ಸಾರಾಂಶ
ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಮೂಲಕ ಯುವ ಜನತೆಯಲ್ಲಿ ದೇಶಭಕ್ತಿ ಜಾಗೃತಗೊಳಿಸುವ ಅಭಿಯಾನಯಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಮೂಲಕ ಯುವ ಜನತೆಯಲ್ಲಿ ದೇಶಭಕ್ತಿ ಜಾಗೃತಗೊಳಿಸುವ ಅಭಿಯಾನಯಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.ಅವರು ಬೀಳೂರನಗರದಲ್ಲಿ ಮಂಗಳವಾರ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ಮನೆ ಮೇಲೆ ತಿರಂಗಾ ಧ್ವಜ ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನ ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದರಿಂದ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಈ ಅಭಿಮಾನವನ್ನು ಹಮ್ಮಿಕೊಂಡಿದ್ದೇವೆ ಎಂದರು.ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಆ.13 ರಿಂದ 15 ರವರೆಗೆ ಪ್ರತಿ ಮನೆಮೇಲೆ ರಾಷ್ಟ್ರ ಧ್ವಜ ಹಾರಿಸಿ, ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ರಾಜು ಮುದೇನೂರ, ಶಿವಾನಂದ ಟವಳಿ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ, ಜಯಪ್ರಕಾಶ ನಾಗಠಾಣ, ಪಂಕಜ ನಿಕ್ಕಮ್, ನಗರಸಭೆ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.---