ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ : ಡಿಸಿ

| Published : Aug 13 2024, 12:47 AM IST

ಸಾರಾಂಶ

ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವೈವಿದ್ಯಮಯವಾಗಿ ಸ್ವಾತಂತ್ರ್ಯಸಂಭ್ರಮ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವೈವಿದ್ಯಮಯವಾಗಿ ಸ್ವಾತಂತ್ರ್ಯಸಂಭ್ರಮ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಈ ಸಂಭ್ರಮದ ಒಂದು ಭಾಗವಾಗಿ ಹರ್ ಘರ್ ತಿರಂಗಾ, ಎಂಬ ಘೋಷ ವಾಕ್ಯದೊಂದಿಗೆ ಆ. 13 ರಿಂದ 15 ರವರೆಗೆ ದೇಶದ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ ದೇಶ ಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮ ಅಭಿವ್ಯಕ್ತಿಗೊಳಿಸಿ ದಾಖಲಿಸುವಂತೆ ಕರೆ ನೀಡಿ ’ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಕಾಲೇಜುಗಳಲ್ಲಿ ’ಹರ್ ಘರ್ ತಿರಂಗಾ’ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ, ಚಿತ್ರಕಲಾ ಶಿಬಿರ, ರಸಪ್ರಶ್ನೆ ಮುಂತಾದ ಕಾರ್ಯಕ್ರಮ ಹಮ್ಮಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಕ್ರಮ ಕೈಗೊಂಡಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಕಾರದಿಂದ ಆ.13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಬಡಾವಣೆಯ ಐತಿಹಾಸಿಕ ಸುಗ್ಗಿ ಕಲ್ಲಿನಿಂದ ಜಿಲ್ಲಾಧಿಕಾರಿಗಳ ಕಚೇರಿ ನೆನಪಿಂಗಳದ ವರೆಗೆ ವಾಕಥಾನ್ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.ಆ. 14 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೆ ಎಂ. ರಸ್ತೆಯ ದಂಟರಮಕ್ಕಿಯಿಂದ ಐಡಿಎಸ್‌ಜಿ ಕಾಲೇಜಿನವರೆಗೆ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಗಳಿಂದ, ಎಐಟಿ ಸರ್ಕಲ್‌ನಿಂದ ಎಐಟಿ ಕಾಲೇಜಿನ ವರೆಗೆ ಎಐಟಿ ಕಾಲೇಜಿನ ವಿದ್ಯಾರ್ಥಿಗಳಿಂದ ತಿರಂಗಾ ಯಾತ್ರೆ ಏರ್ಪಡಿಸಲಾಗುವುದು. ರಿವರ್ ರ್‍ಯಾಪ್ಪಿಂಗ್‌ನ್ನು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರವಾಸೋದ್ಯಮ ಇಲಾಖೆ ಮೂಲಕ ಈ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದಾರೆ.ಸಾರ್ವಜನಿಕರು ಈ ತಿರಂಗಾ ಅಭಿಯಾನದಲ್ಲಿ ಕೈ ಜೋಡಿಸಿ ತಮ್ಮ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸುವಂತೆ ತಿಳಿಸಿದ್ದಾರೆ.