ಸಾರಾಂಶ
ಭಾರತ ಸ್ವಾಂತತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನ ಹತ್ತಿರ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಶಾಸಕ ಮಹಾಂತೇಶ ಕೌಜಲಗಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಬೈಲಹೊಂಗಲ
ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಎಲ್ಲರೂ ಪ್ರೋತ್ಸಾಹಿಸಬೇಕು. ಜನರಲ್ಲಿ ದೇಶಭಕ್ತಿಯ ಭಾವನೆ ತುಂಬುವುದು ಮತ್ತು ಮಹಾನ್ ರಾಷ್ಟ್ರವನ್ನು ರಚಿಸಲು ಕೊಡುಗೆ ನೀಡಿದವರನ್ನು ಸ್ಮರಿಸುವುದು ಅಭಿಯಾನದ ಪ್ರಮುಖ ಉದ್ದೇಶ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.ಭಾರತ ಸ್ವಾಂತತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನ ಬಳಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ತಹಸೀಲ್ದಾರ್ ಎಚ್.ಎನ್.ಶಿರಹಟ್ಟಿ, ಬಿಇಒ ಎ.ಎನ್.ಪ್ಯಾಟಿ, ಮುಖ್ಯಾಧಿಕಾರಿ ವಿರೇಶ ಹಸಬಿ, ಪುರಸಭೆ ಸದಸ್ಯ ಬಾಬು ಕುಡಸೋಮಣ್ಣವರ, ದಿಲಶಾದ ನದಾಫ ಪುರಸಭೆಯ ಅಧಿಕಾರಿ ಸಿಬ್ಬಂದಿ, ಪೌರಕಾರ್ಮಿಕರು ಮತ್ತು ನೀರು ಸರಬರಾಜು ಸಿಬ್ಬಂದಿ ಪಾಲ್ಗೊಂಡಿದ್ದರು.ಈ ಅಭಿಯಾನದ ಭಾಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಪುರಸಭೆಯ ಸ್ವ-ಸಹಾಯ ಸದಸ್ಯರಿಂದ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.