ಹಾರಾಡಿ: ವೈಕುಂಠ ಬಾಳಿಗಾ ಲಾ ಕಾಲೇಜಿನಿಂದ ಎಸ್‌ಸಿ, ಎಸ್ಟಿಗೆ ಕಾನೂನು ಅರಿವು-ನೆರವು

| Published : Feb 10 2024, 01:48 AM IST

ಹಾರಾಡಿ: ವೈಕುಂಠ ಬಾಳಿಗಾ ಲಾ ಕಾಲೇಜಿನಿಂದ ಎಸ್‌ಸಿ, ಎಸ್ಟಿಗೆ ಕಾನೂನು ಅರಿವು-ನೆರವು
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಉದ್ಘಾಟಿಸಿದರು. ಉಡುಪಿಯ ವಕೀಲ ರಾಜೇಶ್ ಅವರು, ಎಸ್.ಸಿ /ಎಸ್.ಟಿ ದೌರ್ಜನ್ಯ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕ, ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎಸ್.ಸಿ/ಎಸ್.ಟಿ ಘಟಕ ಮತ್ತು ಎನ್.ಎಸ್.ಎಸ್. ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಾರಾಡಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಹಾರಾಡಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಉದ್ಘಾಟಿಸಿ, ಸಮಾಜದಲ್ಲಿ ಇಂದಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಡಿಮೆಯಾಗಿಲ್ಲ. ಎಷ್ಟೇ ಕಾನೂನುಗಳನ್ನು ಮಾಡಿದರೂ ಜಾತೀಯತೆ, ಅಸಮಾನತೆ ಇಂದಿಗೂ ಸಮಾಜದಲ್ಲಿ ನೆಲೆವೂರಿದೆ. ಇದಕ್ಕೆ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದೊಂದೇ ದಾರಿ ಎಂದರು.ಉಡುಪಿಯ ವಕೀಲ ರಾಜೇಶ್ ಅವರು, ಎಸ್.ಸಿ /ಎಸ್.ಟಿ ದೌರ್ಜನ್ಯ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು. ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ನಿರ್ದೇಶಕಿ ಪ್ರೊ.(ಡಾ.) ನಿರ್ಮಲಾ ಕುಮಾರಿ ಕೆ., ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಪೂಜಾರಿ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದರ್ಶ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಕುಮಾರ್ ಸುವರ್ಣ ವಂದಿಸಿದರು.ಇದೇ ಸಂದರ್ಭ ಉಚಿತ ಆರೋಗ್ಯ ತಪಾಸಣೆಯ ಕಾರ್ಯಕ್ರಮ ಏರ್ಪಡಿಸಿಲಾಗಿತ್ತು. ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎಸ್.ಸಿ/ಎಸ್.ಟಿ ಘಟಕದ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಕಾರ್ಯಕ್ರಮವನ್ನು ಸಂಯೋಜಿಸಿದರು.