ಕನ್ನಡಪ್ರಭ ವಾರ್ತೆ ಕುಶಾಲನಗರ

ಸಮೀಪದ ಹರದೂರು ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಹರದೂರು - ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿ ಅವರು ಶುಕ್ರವಾರ ಚಾಲನೆ ನೀಡಿದರು.ಕಾಜೂರು ಉರೂಸ್ ಮಕಾಂ ನಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಉರೂಸ್‌ ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಿದರು. ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸುಲೈಮಾನ್ ಸಖಾಫಿ ಮಾತನಾಡಿ, ಉರೂಸ್ ಸೋಮವಾರದಂದು ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲರೂ ಉರೂಸ್ ನಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದರು. ಹರದೂರು ಗ್ರಾ‌ಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎ.ಮುಸ್ತಫಾ ಮಾತನಾಡಿ, ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕಾಜೂರು ಮಕಾಂ ಉರೂಸ್ ಗೆ ಚಾಲನೆ ದೊರೆತಿದೆ. ಉರೂಸ್ ನಲ್ಲಿ ಕೊಡಗಿನ ಎಲ್ಲಾ ಕಡೆಗಳಿಂದಲೂ ಜನರು ಪಾಲ್ಗೊಳ್ಳುತ್ತಾರೆ. ಉರೂಸ್ ನ‌ ಯಶಸ್ವಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು. ಈ ಸಂದರ್ಭ ಮಸ್ಜಿದುನ್ನೂರು ಮುಸ್ಲಿಂ ಜಮಾಅತ್ ಕಮಿಟಿ‌ ಅಧ್ಯಕ್ಷರಾದ ಅಬ್ದುಲ್ಲಾ, ಕಾರ್ಯದರ್ಶಿ ಅಜ಼ೀಜ಼್, ಖಜಾಂಜಿ ಜ಼ಕ್ರಿಯಾ, ಪ್ರಮುಖರಾದ ಯಾಕೂಬ್, ಉಮರ್ ಹಾಜಿ, ಸೈದು, ರಜ಼ಾಕ್, ಕಾದರ್, ಸಿದ್ದೀಕ್, ಕೆ.ಬಿ.ಶಂಶುದ್ಧೀನ್ ಇನ್ನಿತರರು ಇದ್ದರು.