ಸಾರಾಂಶ
ಸೀತಾಪತಿ ದೇವರಿಗೆ ಹೂ ಹಣ್ಣು, ತೆಂಗಿನಕಾಯಿ, ಊದುಬತ್ತಿಯ ಪೂಜೆ ಪುರಸ್ಕಾರಗಳಿಲ್ಲದ ಕಾರಣ ಸಾಮ್ರಾಣಿ ಹಾಗೂ ಕರ್ಪೂರವನ್ನೇ ಅಧಿಕ ಪ್ರಮಾಣದಲ್ಲಿ ಹರಕೆ ರೂಪದಲ್ಲಿ ಅರ್ಪಿಸಿದ ಭಕ್ತರು, ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ಮಧ್ಯಾಹ್ನ 1.30ಕ್ಕೆ ಧೂಪದ ರಾಶಿಗೆ ಅಗ್ನಿಸ್ಪರ್ಷ ಮಾಡಿದ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಕನ್ನಡಪ್ರಭ ವಾರ್ತೆ ನಾಗಮಂಗಲ
ಮಹಾ ಶಿವರಾತ್ರಿ ಪ್ರಯುಕ್ತ ತಾಲೂಕಿನ ಹರಳಕೆರೆ ಶ್ರೀಸೀತಾಪತಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವ ಮತ್ತು ಧೂಪಸೇವೆ ಕಾರ್ಯವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು.ಗ್ರಾಮದ ಶ್ರೀಮಂಚಮ್ಮದೇವಿ ದೇವಸ್ಥಾನದಿಂದ ಶ್ರೀಸೀತಾಪತಿ ಸ್ವಾಮಿ ಬಿರುದು ಮತ್ತು ಪೂಜಾ ಸಾಮಗ್ರಿಗಳ ಹೊರೆಹೊತ್ತ ದೇವರ ಒಕ್ಕಲುಗಳು ಪಾದಯಾತ್ರೆಯಲ್ಲಿ ಗ್ರಾಮದ ಹೊರ ವಲಯದಲ್ಲಿರುವ ಸೀತಾಪತಿ ದೇವರ ಸನ್ನಿಧಾನಕ್ಕೆ ಬಂದ ನಂತರ, ಶ್ರೀರಾಮದೇವರಿಗೆ ವಿಶೇಷ ಪೂಜಾ ವಿಧಿವಿಧಾನ ಹಾಗೂ ಧಾರ್ಮಿಕ ಕೈಂಕರ್ಯ ನಡೆಸಿದರು.
ನಂತರ ಶ್ರೀಸೀತಾಪತಿ, ರಾಮಚಂದ್ರ ಲಕ್ಷ್ಮಣ ಮತ್ತು ಹನುಮಂತದೇವರಿಗೆ ಮಹಾ ಮಂಗಳಾರತಿ, ನಾಮಸೇವೆ ಧೂಪಸೇವೆ ನಡೆಯಿತು. ಜಿಲ್ಲೆ ಹಾಗೂ ನಾಡಿನ ವಿವಿದೆಡೆಗಳಿಂದ ಆಗಮಿಸಿದ್ದ ಭಕ್ತರು ಹರಕೆ ರೂಪದಲ್ಲಿ ದೇವರಿಗೆ ಕಿಲೋ ಗಟ್ಟಲೆ ಸಾಮ್ರಾಣಿ ಮತ್ತು ಕರ್ಪೂರ ಸಮರ್ಪಿಸಿ ತಮ್ಮ ಭಕ್ತಿಭಾವ ಮೆರೆದರು.ಸೀತಾಪತಿ ದೇವರಿಗೆ ಹೂ ಹಣ್ಣು, ತೆಂಗಿನಕಾಯಿ, ಊದುಬತ್ತಿಯ ಪೂಜೆ ಪುರಸ್ಕಾರಗಳಿಲ್ಲದ ಕಾರಣ ಸಾಮ್ರಾಣಿ ಹಾಗೂ ಕರ್ಪೂರವನ್ನೇ ಅಧಿಕ ಪ್ರಮಾಣದಲ್ಲಿ ಹರಕೆ ರೂಪದಲ್ಲಿ ಅರ್ಪಿಸಿದ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ಮಧ್ಯಾಹ್ನ 1.30ಕ್ಕೆ ಧೂಪದ ರಾಶಿಗೆ ಅಗ್ನಿ ಸ್ಪರ್ಷ ಮಾಡಿದ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಬಳಿಕ ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ಹಲಗೂರು: ಮಹಾಶಿವರಾತ್ರಿ ಶಿವನ ದೇಗುಲಗಳಲ್ಲಿ ಭಕ್ತರಿಂದ ಪೂಜೆ
ಹಲಗೂರು:ಮಹಾಶಿವರಾತ್ರಿ ಪ್ರಯುಕ್ತ ಶುಕ್ರವಾರ ಶಿವನ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಭಕ್ತರು ಪೂಜೆ ಸಲ್ಲಿಸಿದರು.ಬೆಳಗ್ಗೆಯಿಂದ ರಾತ್ರಿಯವರೆಗೆ ದೇವಸ್ಥಾನಗಳಿಗೆ ತೆರಳಿದ ಭಕ್ತರು ದೇವರ ದರ್ಶನ ಪಡೆದರು. ರಾತ್ರಿ ಶಿವನಾಮ ಸ್ಮರಿಸುತ್ತಾ ಜಾಗರಣೆ ಮಾಡಿ ಭಕ್ತಿ ಮೆರೆದರು.ಅಂತರವಳ್ಳಿ ಶ್ರೀಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಶುಕ್ರವಾರ ಮುಂಜಾನೆ ಹೋಮ, ಹವನ ನಡೆದವು. ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದೇವಾಲಯದ ಪ್ರವೇಶದ್ವಾರ, ಅವರಣ ಮತ್ತು ಬೆಟ್ಟದ ಮೆಟ್ಟಿಲುಗಳ ಮೇಲೆಲ್ಲಾ ದೀಪಾಲಂಕಾರ ಮಾಡಲಾಗಿತ್ತು. ಸಿದ್ದೇಶ್ವರ ಸ್ವಾಮಿ ಬೆಟ್ಟದ ಕೆಳಗಿರುವ ಶಿವನ ಬೃಹತ್ ಪ್ರತಿಮೆ ಬಣ್ಣ ಬಣ್ಣದ ದೀಪಾಲಂಕರಾದಿಂದ ಕಂಗೊಳಿಸಿ, ಭಕ್ತಾದಿಗಳ ಕಣ್ಮನ ಸೆಳೆಯಿತು.ಸುತ್ತಮುತ್ತಲಿನ ಹಲವಾರು ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಕುಟುಂಬದ ಸದಸ್ಯರೊಂದಿಗೆ ಆಗಮಿಸಿ, ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಶುಕ್ರವಾರ ರಾತ್ರಿ ಭಕ್ತರು ಇಡೀ ರಾತ್ರಿ ಬೆಟ್ಟದ ತಪ್ಪಲಿನಲ್ಲಿ ಕುಳಿತು ಶಿವ ಸ್ಮರಣೆ ಮಾಡಿ ಶಿವನ ಕೃಪೆಗೆ ಪಾತ್ರರಾದರು.ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶುಕ್ರವಾರ ರಾತ್ರಿ ಮತ್ತು ಶನಿವಾರ ಬೆಳಗ್ಗೆಯಿಂದ ಸಂಜೆ ನಾಲ್ಕು ಗಂಟೆಯವರೆಗೂ ನಿರಂತರವಾಗಿ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಕುಂಟಬೋರಪ್ಪ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ರಾಜೇಗೌಡ ತಿಳಿಸಿದರು.