ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಮತ್ತೆ ಭರ್ತಿಯಾಗಿದೆ. ಭಾರಿ ಮಳೆಗೆ ಜಲಮೂಲಗಳಲ್ಲಿ ಭಾರಿ ಏರಿಕೆ ಕಂಡಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಮತ್ತೆ ಭರ್ತಿಯಾಗಿದೆ. ಜಿಲ್ಲೆಯಾದ್ಯಂತ ಬುಧವಾರ ಸಂಜೆ ಸತತ ಮೂರು ಗಂಟೆ ಸುರಿದ ಭಾರಿ ಮಳೆಯಿಂದಾಗಿ ಜಲ ಮೂಲಗಳಲ್ಲಿ ಭಾರಿ ಏರಿಕೆ ಕಂಡಿದೆ. ಪರಿಣಾಮ ಹಾರಂಗಿ ಜಲಾಶಯಕ್ಕೆ 8220 ಕ್ಯೂಸೆಕ್ ನೀರು ಹರಿದು ಬಂದಿತ್ತು.

ಹಾರಂಗಿ ಭರ್ತಿಯಾದ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಗುರುವಾರ ನಾಲ್ಕು ಕ್ರೆಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಅಕ್ಟೋಬರ್ ತಿಂಗಳಲ್ಲಿ ಮತ್ತೆ ಜಲಾಶಯ ಭರ್ತಿಯಾಗಿದೆ.

ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 53.69 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.41 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2998.59 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2953.92 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ 38.28 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 45.15 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 33.26 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 70.35 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ 81.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1 ಮಡಿಕೇರಿ ಕಸಬಾ 61, ನಾಪೋಕ್ಲು 35.60, ಸಂಪಾಜೆ 31.50, ಭಾಗಮಂಡಲ 25, ವಿರಾಜಪೇಟೆ 44.80, ಅಮ್ಮತ್ತಿ 45.50, ಹುದಿಕೇರಿ 33, ಶ್ರೀಮಂಗಲ 29, ಪೊನ್ನಂಪೇಟೆ 40, ಬಾಳೆಲೆ 31.04, ಸೋಮವಾರಪೇಟೆ 88.40, ಶನಿವಾರಸಂತೆ 65, ಶಾಂತಳ್ಳಿ 68, ಕೊಡ್ಲಿಪೇಟೆ 60, ಕುಶಾಲನಗರ 86.60, ಸುಂಟಿಕೊಪ್ಪ 76.20 ಮಿ.ಮೀ.ಮಳೆಯಾಗಿದೆ.