ಸಮುದಾಯದ ಕಲ್ಯಾಣ ಮಂಟಪಗಳನ್ನು ಕಟ್ಟುವ ಆದ್ಯತೆಗಿಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವತ್ತ ಹೆಚ್ಚಿನ ಗಮನ ಹರಿಸಬೇಕು. ಇದರಿಂದ ಸಮಾಜ ಅಭಿವೃದ್ಧಿಯಾಗುತ್ತದೆ.
ಮುಂಡರಗಿ: ರಾಜ್ಯ ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಮಾಜದ ಅಧ್ಯಕ್ಷ ದೇವು ಹಡಪದ ಅವರು ರಾಜ್ಯದ ಹಡಪದ ಸಮಾಜದ ಮಕ್ಕಳಿಗೆ ಪ್ರತಿಯೊಬ್ಬರಿಗೂ ಶಿಕ್ಷಣ ಪಡೆಯುವಂಥ ವ್ಯವಸ್ಥೆ ಕಲ್ಪಿಸಿಕೊಡಬೇಕು. ಇದಕ್ಕಾಗಿ ನಿರಂತರ ಶ್ರಮ ವಹಿಸಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಕಿವಿಮಾತು ಹೇಳಿದರು.
ಇತ್ತೀಚೆಗೆ ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಮಾಜದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ದೇವು ಹಡಪದ ಅವರನ್ನು ಮಂಗಳವಾರ ಮುಂಡರಗಿಯಲ್ಲಿ ಸನ್ಮಾನಿಸಿ ಮಾತನಾಡಿದರು.ಸಮುದಾಯದ ಕಲ್ಯಾಣ ಮಂಟಪಗಳನ್ನು ಕಟ್ಟುವ ಆದ್ಯತೆಗಿಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವತ್ತ ಹೆಚ್ಚಿನ ಗಮನ ಹರಿಸಬೇಕು. ಇದರಿಂದ ಸಮಾಜ ಅಭಿವೃದ್ಧಿಯಾಗುತ್ತದೆ ಎಂದರು.ಸನ್ಮಾನ ಸ್ವೀಕರಿಸಿ ರಾಜ್ಯಾಧ್ಯಕ್ಷ ದೇವು ಹಡಪದ ಮಾತನಾಡಿ, ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹದಂಥ ಕಾರ್ಯದ ಜತೆಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಶೈಕ್ಷಣಿಕ ಪ್ರಗತಿಗಾಗಿ ನಿರಂತರ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುತ್ತಣ್ಣ ಕಡಗದ, ಡಂಬಳ ಮಂಡಲ ಬಿಜೆಪಿ ಅಧ್ಯಕ್ಷ ಅಂದಪ್ಪ ಹಾರೋಗೇರಿ, ಮುದ್ಲಿಂಗಪ್ಪ ಕೊರ್ಲಹಳ್ಳಿ, ರಜನಿಕಾಂತ ದೇಸಾಯಿ, ವೆಂಕನಗೌಡ ಪಾಟೀಲ, ರವಿ ಕರಿಗಾರ, ಪುರಸಭೆ ಮಾಜಿ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಕೃಷ್ಣ ಬಂಡಿ, ಪ್ರಭು ಕೊರ್ಲಹಳ್ಳಿ, ನಾಗರಾಜ ಕಾಟ್ರಹಳ್ಳಿ, ಬಸವರಾಜ ಸಂಗನಾಳ, ದ್ಯಾಮಣ್ಣ ತಳವಾರ, ಮುತ್ತು ಅಳವಂಡಿ, ಸೋಮು ಹಕ್ಕಂಡಿ, ತಾಲೂಕು ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಈರಣ್ಣ ಹಡಪದ, ರವಿ ಹಡಪದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇಂದು ವಿಶ್ವ ಜಲ ದಿನಾಚರಣೆ ಜಾಗೃತಿ ಕಾರ್ಯಕ್ರಮಗದಗ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾಟರ್ ಫಾರ್ ವಾಯ್ಸ್ಲೆಸ್ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಜಲ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ಏ. 1ರಂದು ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ನ್ಯಾಯಾಲಯದ ಎರಡನೇ ಮಹಡಿಯ ವಿ.ಸಿ. ಸಭಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಾಗವೇಣಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ. ಕಲ್ಲೂರ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಗಂಗಾಧರ ಸಿ.ಎಂ., ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಗೀತಾ ಶಿಂಧೆ, ಹಿರಿಯ ಸಿವಿಲ್ ನ್ಯಾಯಾಧೀಶ ಗಿರಿಮಲ್ಲಪ್ಪ ಆರ್. ಶೆಟ್ಟರ್, ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಪದ್ಮಶ್ರೀ ಆರ್. ಪಾಟೀಲ, ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ, ದ್ವಿತೀಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬೀರಪ್ಪ ಕಾಂಬಳೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ವಾಟರ್ ಫಾರ್ ವಾಯ್ಸ್ ಲೆಸ್ ಸಂಸ್ಥೆಯ ಸಂಸ್ಥಾಪಕ ಜೈನ್ ಸನ್ನಿ ಹಸ್ತಿಮಲ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಖಿಮಿ ಸನ್ನಿ ಜೈನ್, ಅರಿಹಂತ ಸುರೇಶಕುಮಾರ್ ಜೈನ್ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.