ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ತೊಂದರೆ: ಎಸ್ಪಿಗೆ ಮನವಿ

| Published : May 15 2024, 01:40 AM IST

ಸಾರಾಂಶ

ಏ.26ರಂದು ಉಡುಪಿ -ಚಿಕ್ಕಮಗಳೂರು ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಸಂದರ್ಭದಲ್ಲಿ, ಸೆಲೆಬ್ರೆಟಿಗಳು ಮತದಾನ ಮಾಡುವುದನ್ನು, ಚುನಾವಣಾ ಆಯೋಗದ ಅಧಿಕೃತ ಪಾಸ್ ಇರುವ ಕ್ಯಾಮೆರಾಮೆನ್‌ಗಳು ಹಾಗೂ ಫೋಟೋಗ್ರಫರ್‌ಗಳು ಚಿತ್ರೀಕರಣ ಮಾಡುವಾಗ ಪೊಲೀಸ್ ಅಧಿಕಾರಿಗಳು ಅಡ್ಡಿಪಡಿಸಿದ್ದರು. ಇದರಿಂದ ಮಾಧ್ಯಮದವರ ಕರ್ತವ್ಯಕ್ಕೆ ಅಡ್ಡಿಯಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಇತ್ತೀಚೆಗೆ ಲೋಕಸಭಾ ಚುನಾವಣೆಯ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.

ಏ.26ರಂದು ಉಡುಪಿ -ಚಿಕ್ಕಮಗಳೂರು ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಸಂದರ್ಭದಲ್ಲಿ, ಸೆಲೆಬ್ರೆಟಿಗಳು ಮತದಾನ ಮಾಡುವುದನ್ನು, ಚುನಾವಣಾ ಆಯೋಗದ ಅಧಿಕೃತ ಪಾಸ್ ಇರುವ ಕ್ಯಾಮೆರಾಮೆನ್‌ಗಳು ಹಾಗೂ ಫೋಟೋಗ್ರಫರ್‌ಗಳು ಚಿತ್ರೀಕರಣ ಮಾಡುವಾಗ ಪೊಲೀಸ್ ಅಧಿಕಾರಿಗಳು ಅಡ್ಡಿಪಡಿಸಿದ್ದರು. ಇದರಿಂದ ಮಾಧ್ಯಮದವರ ಕರ್ತವ್ಯಕ್ಕೆ ಅಡ್ಡಿಯಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಕೆಲವು ಮತಗಟ್ಟೆಗಳ ಹೊರಗಡೆ, ಗ್ರಾಮೀಣ ಪ್ರದೇಶಗಳ ಪತ್ರಕರ್ತರಿಗೆ ಸರತಿ ಸಾಲಿನಲ್ಲಿ ನಿಂತ ಮತದಾರರ ಫೋಟೋ ತೆಗೆಯಲು ಕೂಡ ಅಧಿಕಾರಿಗಳು ಅವಕಾಶ ನೀಡಲಿಲ್ಲ. ತಾವು ಈ ಬಗ್ಗೆ ಪರಿಶೀಲಿಸಿ ಮುಂದೆ ಈ ರೀತಿ ಸಮಸ್ಯೆ ಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ನಿಯೋಗದಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರ. ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಕಾರ್ಯದರ್ಶಿಗಳಾದ ರಹೀಂ ಉಜಿರೆ, ಪ್ರಮೋದ್ ಸುವರ್ಣ, ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಸಮಿತಿ ಸದಸ್ಯರಾದ ಮೈಕಲ್ ರೋಡ್ರಿಗಸ್, ಹರೀಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.