ಸಾರಾಂಶ
ನಮ್ಮ ಮೆಟ್ರೋದ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಮ್ಮ ಮೆಟ್ರೋದ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಡಾ. ರವಿಶೆಟ್ಟಿ ಬೈಂದೂರು, ನಮ್ಮ ಮೆಟ್ರೋದ ಮೈಸೂರ್ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ನಿಲ್ದಾಣದ ಉಸ್ತುವಾರಿ ಅಧಿಕಾರಿ ಗಜೇಂದ್ರನ್ ಅವರು ಸಿಬ್ಬಂದಿಗೆ ಕಿರುಕುಳ ನೀಡುತ್ತಾ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಆದ್ದರಿಂದ ಇವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾ.14 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ತಕ್ಷಣ ಹಿರಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.