ಸಾರಾಂಶ
ತಾಲೂಕಿನ ಹರವೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಮಾದಪ್ಪ ಹಾಗೂ ಉಪಾಧ್ಯಕ್ಷರಾಗಿ ದೊರೆಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕಿನ ಹರವೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಮಾದಪ್ಪ ಹಾಗೂ ಉಪಾಧ್ಯಕ್ಷರಾಗಿ ದೊರೆಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.ಗ್ರಾಮದ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಾದಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ದೊರೆಸ್ವಾಮಿ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆಯ ವಿ. ಹೇಮಂತ್‌ಕುಮಾರ್ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಸಿಇಒ ಎಸ್. ಬಸವಣ್ಣ ಇದ್ದರು.
ನೂತನ ಅಧ್ಯಕ್ಷ ಮಾದಪ್ಪ ಮಾತನಾಡಿ, ಸಂಘದ ಸದಸ್ಯರು ಹಾಗೂ ನಿರ್ದೇಶಕರು ಎರಡನೇ ಬಾರಿಗೆ ನನ್ನನ್ನು ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲ ನಿರ್ದೇಶಕರ ಸಲಹೆ, ಸಹಕಾರವನ್ನು ಪಡೆದು, ಸರ್ಕಾರ ಹಾಗೂ ಸಹಕಾರ ಸಂಘದ ಮೂಲಕ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯವನ್ನುಕಲ್ಪಿಸಿಕೊಡುವ ಜೊತೆಗೆ ಹರವೆ ಸಹಕಾರ ಸಂಘವನ್ನು ಮಾದರಿ ಸಂಘವನ್ನಾಗಿಸಲು ಎಲ್ಲರು ಶ್ರಮಿಸೋಣ ಎಂದರು.ಸಭೆಯಲ್ಲಿ ಸಹಕಾರ ಸಂಘದ ನೂತನ ನಿರ್ದೇಶಕರಾದ ರೇವಪ್ಪ( ರೇವಣ್ಣ), ಎಚ್.ಎಸ್. ರವಿ, ಎಸ್. ನಂಜುಂಡಸ್ವಾಮಿ, ಗುರುಸಿದ್ದಪ್ಪ, ಜಿ. ಸುಂದ್ರಮ್ಮ, ಕೂಸಮ್ಮ, ನಾಗೇಗೌಡ, ಎಂ. ಯೋಗೇಶ್, ಬಸವಯ್ಯ, ನಾಗಮಲ್ಲಮ್ಮ ಉಪಸ್ಥಿತರಿದ್ದರು.
ಬಿಜೆಪಿ ಮುಖಂಡರಿಂದ ಅಭಿನಂದನೆ: ಹರವೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಮಾದಪ್ಪ, ದೊರೆಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಶಾಲು ಹೊದಿಸಿ ಹಾರ ಹಾಕಿ ನೂತನ ಆಡಳಿತ ಮಂಡಳಿಯ ನಿರ್ದೇಶಕರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಮಹದೇವಪ್ರಸಾದ್, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರವೆ ಮಹೇಶ್, ಹರವೆ ಗ್ರಾ.ಪಂ. ಅಧ್ಯಕ್ಷ ಚಿಕ್ಕನಾಗಪ್ಪ, ಮಾಜಿ ಅಧ್ಯಕ್ಷರಾದ ಎಚ್.ಎಸ್. ಗಿರೀಶ್, ಎಂ.ಸಿ.ಮಲ್ಲಣ್ಣ, ಎಚ್.ಎಲ್. ಸುರೇಶ್, ಮಾಜಿ ಉಪಾಧ್ಯಕ್ಷ ನಟರಾಜು ಮೊದಲಾದವರು ಇದ್ದರು.