ಸಾರಾಂಶ
ವಿದ್ಯಾರ್ಥಿಗಳು ಶಿಸ್ತು, ಕಠಿಣ ಪರಿಶ್ರಮದಿಂದ ಜೀವನದಲ್ಲಿ ಉನ್ನತ ಗುರಿ ಸಾಧಿಸಬೇಕು. ಈ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವತ್ತ ಚಿತ್ತ ಹರಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ವಿದ್ಯಾರ್ಥಿಗಳು ಶಿಸ್ತು, ಕಠಿಣ ಪರಿಶ್ರಮದಿಂದ ಜೀವನದಲ್ಲಿ ಉನ್ನತ ಗುರಿ ಸಾಧಿಸಬೇಕು. ಈ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವತ್ತ ಚಿತ್ತ ಹರಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅಭಿಪ್ರಾಯಪಟ್ಟರು.ತಾಲೂಕಿನ ಶಿರಹಟ್ಟಿ ಕೆ.ಡಿ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನರೇಗಾ ಯೋಜನೆಯಡಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಭೋಜನಾಲಯ(ಅಡುಗೆ ಕೋಣೆ)ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಕ್ಷೇತ್ರ ವ್ಯಾಪ್ತಿಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹುಕ್ಕೇರಿ ಕ್ಷೇತ್ರದ ಸರ್ಕಾರಿ ಶಾಲೆಗಳನ್ನು ಸದೃಢಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದುಕೊಂಡು ದೇಶದ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಅವರು ಕಿವಿಮಾತು ಹೇಳಿದರು.
ಗ್ರಾಪಂ ಅಧ್ಯಕ್ಷ ಸಯ್ಯದ ಅಮ್ಮಣಗಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಖಿಲ ಡಿ.ಕೆ.ಅವರಗೋಳ, ಗುತ್ತಿಗೆದಾರ ಯಲ್ಲಪ್ಪ ಡಪ್ಪರಿ, ಪಿಡಿಒ ಮಹಾದೇವ ಜಿನರಾಳಿ, ಎಸ್‌ಡಿಎಂಸಿ ಅಧ್ಯಕ್ಷ ಚಿದಾನಂದ ಪಾಟೀಲ, ಮುಖಂಡರಾದ ಸತ್ಯಪ್ಪ ಹಾಲಟ್ಟಿ, ಕೆ.ಜಿ. ಪಾಟೀಲ, ಶಂಕರ ಗುಡಸಿ, ಮಲಗೌಡ ಪಾಟೀಲ, ಆನಂದ ದಪ್ಪಾದೂಳಿ, ರಾಮಣ್ಣ ಗೋಟೂರಿ, ಶೀತಲ ಬ್ಯಾಳಿ, ಜಯಪಾಲ ಹುಲ್ಯಾಗೋಳ, ಗ್ರಾಪಂ ಸದಸ್ಯರಾದ ಪುಟ್ಟು ಚೌಗಲಾ, ಬಸವರಾಜ ಪಾಟೀಲ, ಡಿ.ಕೆ. ಅವರಗೋಳ, ಮಂಗಲ ಮಾದರ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಜೈನ ಬಸದಿಯ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಗ್ರಾಮದ ಸಣ್ಣ ನೀರಾವರಿ ಇಲಾಖೆಯ ಭರ್ತಿಯಾದ ಕೆರೆಗೆ ಬಾಗಿನ ಅರ್ಪಿಸಲಾಯಿತು.