ಸಾರಾಂಶ
ಕನ್ನಡಪ್ರಭ ವಾರ್ತೆ ಗೋಕಾಕ
ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಆತ್ಮ ವಿಶ್ವಾಸದಿಂದ ಪ್ರಯತ್ನಶೀಲರಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.ನಗರದಲ್ಲಿ ಕೆಎಲ್‌ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದವರು ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಮ್ಮಿಕೊಂಡ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನಗಳ ಸ್ಫರ್ಧೆ ಚೈತನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಎಲ್ಲ ರೀತಿಯ ಸೌಲಭ್ಯ ಸಹಕಾರಗಳಿದ್ದು, ಅವುಗಳ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ. ಕೆಎಲ್‌ಇ ಸಂಸ್ಥೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಕಾರ್ಯಗಳ ಆಯೋಜನೆಯ ಮೂಲಕ ಅವರಲ್ಲಿ ಸ್ಫರ್ಧಾತ್ಮಕ ಮನೋಭಾವ ಬೆಳೆಸಿ ಅವರನ್ನು ಸಾಧಕರನ್ನಾಗಿ ಮಾಡುತ್ತಿರುವುದು ಮಾದರಿಯಾಗಿದೆ. ಸ್ವಾಮಿ ವಿವೇಕಾನಂದ ಎದ್ದೇಳಿ ವಾಣಿಯಿಂದ ಪ್ರೇರೆಪಿತರಾಗಿ ಉತ್ತಮ ಸಾಧನೆ ಮಾಡಿ ಸಮಾಜದಲ್ಲಿ ಗೌರವಯುತ ವ್ಯಕ್ತಿಗಳಾಗಿರೆಂದು ಹಾರೈಸಿದರು.
ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಎಲ್‌ಇ ಸಂಸ್ಥೆಯ ಎಲ್ಲ ಪಿಯ ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶೀಪ್ ನೀಡಿ ಸ್ಫರ್ಧಾತ್ಮ ಪರೀಕ್ಷೆಗಳ ತರಬೇತಿಯನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.ಗೋಕಾಕ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಿಗಾರ, ಕನ್ನಡ ವಿಷಯ ಪರಿವೀಕ್ಷಕ ಅರಿಹಂತ ಬಿರಾದಾರಪಾಟೀಲ, ಕೆಎಲ್‌ಇ ಸಂಸ್ಥೆಯ ಸ್ಥಳೀಯ ಸಮಿತಿ ಅಧ್ಯಕ್ಷ ಎಂ.ಡಿ.ಚುನಮರಿ, ಆಡಳಿತಾಧಿಕಾರಿ ಜಿ.ಎಂ.ಅಂದಾನಿ, ಪ್ರಾಚಾರ್ಯರಾದ ಕೆ.ಬಿ.ಮೆವುಂಡಿಮಠ ಹಾಗೂ ಎಂ.ಎ.ಪಾಟೀಲ ಇದ್ದರು.