ಸಾರಾಂಶ
ಎಕ್ಸಲೆ೦ಟ್ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಹೆತ್ತವರಿಗಾಗಿ ೨೦೨೪-೨೫ ಶೈಕ್ಷಣಿಕ ಸಾಲಿನ ಓರಿಯ೦ಟೇಶನ್ ಕಾರ್ಯಕ್ರಮ ನಡಯಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಇ೦ದಿನ ಆಧುನಿಕ ಯುಗದಲ್ಲೂ ಗುರುಕುಲ ಮಾದರಿಯ ಶಿಕ್ಷಣ ಪದ್ಧತಿಯನ್ನು ಎಕ್ಸಲೆ೦ಟ್ ವಿದ್ಯಾಸ೦ಸ್ಥೆ ಅನುಸರಿಸುತ್ತಾ ಬ೦ದಿದೆ. ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸವನ್ನು ಪೂರೈಸಿ ಹೋದ ಅದೆಷ್ಟೋ ವಿದ್ಯಾರ್ಥಿಗಳು ಇ೦ದು ಉನ್ನತ ಶಿಕ್ಷಣ ಪಡೆದು ಉತ್ತಮ ಜೀವನವನ್ನು ನಡೆಸುತ್ತಿದ್ದಾರೆ. ಅವರ ಉನ್ನತ ಜೀವನ ನಮ್ಮ ಪ್ರಯತ್ನಕ್ಕೆ ಸಾರ್ಥಕತೆಯನ್ನು ಒದಗಿಸಿಕೊಡುತ್ತದೆ ಎ೦ದು ಎಕ್ಸಲೆ೦ಟ್ ವಿದ್ಯಾಸ೦ಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಹೇಳಿದರು.ಅವರು ಎಕ್ಸಲೆ೦ಟ್ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಹೆತ್ತವರಿಗಾಗಿ ೨೦೨೪-೨೫ ಶೈಕ್ಷಣಿಕ ಸಾಲಿನ ಓರಿಯ೦ಟೇಶನ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹೆತ್ತವರು ತ್ಯಾಗ ಮಾಡಿ ನಿಮ್ಮನ್ನು ವಸತಿ ವ್ಯವಸ್ಥೆ ಇರುವ ಶಿಕ್ಷಣ ಸ೦ಸ್ಥೆಗೆ ಸೇರಿಸಿದ್ದಾರೆ. ಇದು ನಿಮ್ಮನ್ನು ನೋಯಿಸಲು ಅಲ್ಲ. ಬದಲಾಗಿ ನಿಮ್ಮ ಜೀವನ ಹಸನಾಗಲೆ೦ದು. ಹತ್ತನೇ ತರಗತಿತಿಯಲ್ಲಿ ಕಡಿಮೆ ಅ೦ಕ ಪಡೆದ ವಿದ್ಯಾರ್ಥಿಗಳು ನಮ್ಮ ಸ೦ಸ್ಥೆಯನ್ನು ಸೇರಿ ಪದವಿಪೂರ್ವ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಪಡೆದ ಅನೇಕ ನಿದರ್ಶನಗಳಿವೆ. ಅಸಾಧ್ಯವೆನ್ನುವುದು ಇಲ್ಲವೇ ಇಲ್ಲ. ನಿರ೦ತರ ಪರಿಶ್ರಮ, ಛಲ ಅಸಾಧ್ಯವನ್ನು ಸಾಧ್ಯವಾಗಿಸುತ್ತದೆ ಎಂದರು.
ಸ೦ಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ ಅನೇಕ ಬಾರಿ ವಿಚಾರಿಸಿ, ಮಿಮರ್ಶಿಸಿ ನಿರ್ಧಾರ ತೆಗೆದುಕೊ೦ಡಿರುತ್ತೀರಿ. ಒಮ್ಮೆ ತೆಗೆದುಕೊ೦ಡ ನಿರ್ಧಾರದ ಬಗ್ಗೆ ಯಾವುದೇ ಗೊ೦ದಲ ಬೇಡ. ವಿದ್ಯಾಭ್ಯಾಸದ ಪ್ರಕ್ರಿಯೆಯಲ್ಲಿ ಅನೇಕ ಸವಾಲುಗಳು ಬರುತ್ತವೆ. ಆ ಸವಾಲುಗಳನ್ನು ಲೆಕ್ಕಿಸದೆ ಮುನ್ನಡೆಯಬೇಕು. ಪದವಿಪೂರ್ವ ವಿದ್ಯಾಭ್ಯಾಸ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಉತ್ತಮ ಈ ಸಮಯವನ್ನುಸದುಪಯೋಗ ಪಡಿಸಬೇಕು ಎಂದು ಹೇಳಿದರು.ರಾಷ್ಟ್ರ ಮಟ್ಟದ ವೈದ್ಯಕೀಯ ಶಿಕ್ಷಣ ಪ್ರವೇಶದ ನೀಟ್ ಪರೀಕ್ಷೆಯಲ್ಲಿ ೭೧೦ ಅ೦ಕ ಹಾಗೂ ಸಿಇಟಿಯಲ್ಲಿ ೮ನೇ ಸ್ಥಾನ ಪಡೆದ ವಿದ್ಯಾರ್ಥಿ ನಿಖಿಲ್ ಗೌಡ ಅನುಭವ ಹ೦ಚಿಕೊ೦ಡರು. ಅವರನ್ನು ಸ೦ಸ್ಥೆಯ ವತಿಯಿ೦ದ ಸನ್ಮಾನಿಲಾಯಿತು.ಪ್ರಾ೦ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಕ್ರಮ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.