ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೆಡಿಕಲ್ ಕಾಲೇಜ್ ಅಥವಾ ಎಂಜಿನಿಯರಿಂಗ್ ಕಾಲೇಜ್ ಸ್ಥಾಪನೆ. ಪ್ರವಾಸೋದ್ಯಮಕ್ಕೆ ಒತ್ತು ನೀಡುವುದು, ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಮುಂದಿನ ಬಜೆಟ್‌ನಲ್ಲಿ ಜಾರಿಗೊಳಿಸುವಂತೆ ಒತ್ತಾಯಿಸಿ ಹರಿಹರ ನಾಗರೀಕರ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

- ಹರಿಹರ ನಾಗರೀಕರ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗೆ ಮನವಿ

- - -

ಹರಿಹರ: ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೆಡಿಕಲ್ ಕಾಲೇಜ್ ಅಥವಾ ಎಂಜಿನಿಯರಿಂಗ್ ಕಾಲೇಜ್ ಸ್ಥಾಪನೆ. ಪ್ರವಾಸೋದ್ಯಮಕ್ಕೆ ಒತ್ತು ನೀಡುವುದು, ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಮುಂದಿನ ಬಜೆಟ್‌ನಲ್ಲಿ ಜಾರಿಗೊಳಿಸುವಂತೆ ಒತ್ತಾಯಿಸಿ ಹರಿಹರ ನಾಗರೀಕರ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ತಾಲೂಕಿನ ರಾಜನಹಳ್ಳಿಯಲ್ಲಿ ಶ್ರೀ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಎಂಟನೇ ವರ್ಷದ ವಾಲ್ಮೀಕಿ ಜಾತ್ರಾ ಮಹೋತ್ಸವ, ಶ್ರೀಮಠದ 28ನೇ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು ಪುಣ್ಯಾನಂದಪುರಿ ಶ್ರೀಗಳ 19ನೇ ವರ್ಷದ ಪುಣ್ಯಾರಾಧನೆ ಹಾಗೂ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳ 18ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷ ಎಚ್.ಕೆ. ಕೊಟ್ರಪ್ಪ, ಅಧ್ಯಕ್ಷ ಎಚ್.ನಿಜಗುಣ, ಪ್ರಧಾನ ಕಾರ್ಯದರ್ಶಿ ಶೇಖರಗೌಡ ಪಾಟೀಲ್ ಅವರಿಂದ ಸಿದ್ಧಪಡಿಸಿದ ಮನವಿಯನ್ನು ರಾಜ್ಯ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್‌. ಮರಿಯೋಜಿ ರಾವ್ ಅವರು ಮೂಲಕ ವೇದಿಕೆಯಲ್ಲಿದ್ದ ಸಿಎಂಗೆ ಸಲ್ಲಿಸಲಾಯಿತು.

ಹರಿಹರ ನಗರದಲ್ಲಿ ಮೆಡಿಕಲ್ ಕಾಲೇಜ್ ಅಥವಾ ಎಂಜಿನಿಯರಿಂಗ್ ಕಾಲೇಜ್ ಸ್ಥಾಪನೆ ಮಾಡಬೇಕು, ಹರಿಹರ ನಗರವನ್ನು ಪ್ರವಾಸೋದ್ಯಮ ಇಲಾಖೆಗೆ ಸೇರಿಸುವ ಜೊತೆಗೆ ಹರಿಹರ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಈ ಬೇಡಿಕೆಗಳನ್ನು ಮುಂಬರಲಿರುವ ಬಜೆಟ್ ನಲ್ಲಿಯೇ ಸೇರಿಸಿ ಹರಿಹರದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಮಿತಿಯವರು ಕೋರಿದರು.

- - -

-09HRR.04:

ಹರಿಹರ ನಾಗರೀಕರ ಹೋರಾಟ ಸಮಿತಿಯಿಂದ ಮುಖ್ಯ ಮಂತ್ರಿಗಳಿಗೆ ರಾಜ್ಯ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್‌ ಮರಿಯೋಜಿರಾವ್ ಅವರು ಮೂಲಕ ಮನವಿ ಸಲ್ಲಿಸಲಾಯಿತು.