ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಾಜಿ ಸಚಿವ ರಮಾನಾಥ ರೈ ಅಭಿನಂದನೆ

| Published : Nov 19 2025, 01:45 AM IST

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಅಭಿನಂದನಾ ಸಮಿತಿ ವತಿಯಿಂದ ಇಬ್ಬರೂ ಸಾಧಕರಿಗೆ ಅಭಿನಂದನಾ ಸಮಾರಂಭ ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆಯಿತು.

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಅಭಿನಂದನಾ ಸಮಿತಿ ವತಿಯಿಂದ ಇಬ್ಬರೂ ಸಾಧಕರಿಗೆ ಅಭಿನಂದನಾ ಸಮಾರಂಭ ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆಯಿತು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದೀಪಪ್ರಜ್ವಲನ ನಡೆಸಿ ಆಶೀರ್ವದಿಸಿ, ಹರಿಕೃಷ್ಣ ಪುನರೂರು ಹಾಗೂ ರಮಾನಾಥ ರೈ ಇಬ್ಬರೂ ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡವರು. ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕಿದ ಈರ್ವರು, ಜಾತ್ಯತೀತವಾಗಿ, ಪಕ್ಷತೀತವಾಗಿ ಅಭಿನಂದಿಸಲ್ಪಟ್ಟಿರುವುದು ಸಂತೋಷ ನೀಡಿದೆ ಎಂದರು.

ಅಭಿನಂದನೆ ಸ್ವೀಕರಿಸಿದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ ಸಾರ್ವಜನಿಕ ಬದುಕು ಸೇವೆಗಾಗಿ ಇರುವುದು. ಅವಕಾಶ ಸಿಕ್ಕಾಗ ಪ್ರಾಮಾಣಿಕವಾಗಿ ಸೇವೆ ಮಾಡುವುದು ನಮ್ಮ ಕರ್ತವ್ಯ. ಜಾತಿ ಧರ್ಮ ಮೀರಿ ಮನುಷ್ಯರಾಗಿ ಬಾಳಬೇಕೆನ್ನುವ ಆಶಯದೊಂದಿಗೆ ಭೇದ ರಹಿತವಾಗಿ ಬದುಕಿಕೊಂಡು ಬಂದಿದ್ದೇನೆ ಎಂದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾತನಾಡಿ ಮನುಷ್ಯ ತನ್ನನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಸಂಪಾದನೆಯ ಬಹುಭಾಗವನ್ನು ಬಡವರ ಏಳಿಗೆಗೆ ನೀಡಿದಾಗ ಹೆಚ್ಚಿನ ಪುಣ್ಯ ಸಂಪದಾನೆಯಾಗುತ್ತದೆ ಎಂದರು. ದ.ಕ. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭ ಸ್ವಾಮೀಜಿ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿದರು.ಅಭಿನಂದನಾ ಸಮಿತಿ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು.

ಬಡಗಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ, ಗೌರವಾಧ್ಯಕ್ಷರಾದ ರಘುನಾಥ ಸೋಮಯಾಜಿ, ಶಿವಪ್ರಸಾದ್ ಅಜಿಲರು ಅಳದಂಗಡಿ, ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್ ಪಂಜಿಕಲ್ಲು, ಕೋಶಾಧಿಕಾರಿ ರಾಮಗಣೇಶ್ ಪ್ರಭು ಕೈಕುಂಜೆ ಉಪಸ್ಥಿತರಿದ್ದರು.

ಕೈಯ್ಯೂರು ನಾರಾಯಣ ಭಟ್ ಸ್ವಾಗತಿಸಿದರು. ಅಭಿನಂದನ ಗ್ರಂಥ ಸಮಿತಿ ಸಂಪಾದಕ ಪ್ರೊ.ರಾಜಮಣಿ ರಾಮಕುಂಜ ಅನಿಸಿಕೆ ವ್ಯಕ್ತಪಡಿಸಿದರು. ಮಹಾಲಿಂಗ ಭಟ್, ಜಯರಾಮ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್ ಪಂಜಿಕಲ್ಲು ವಂದಿಸಿದರು. ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

ಸಂಚಾಲಕ ಪ್ರಕಾಶ್ ಕಾರಂತ್ ನರಿಕೊಂಬು, ಸಹ ಸಂಚಾಲಕ ಸುಧಾಕರ ಆಚಾರ್ಯ ಮಾರ್ನಬೈಲು, ಉಪಾಧ್ಯಕ್ಷ ಸುನೀಲ್ ಬಿ., ಪ್ರವೀಣ್ ಜಕ್ರಿಬೆಟ್ಟು, ವಿಶ್ವನಾಥ ಬೆಳ್ಚಾಡ ಕೂಡೂರು, ಸ್ವಾಗತ ಸಮಿತಿಯ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಆರ್ಥಿಕ ಸಮಿತಿ ಉಮೇಶ್ ನೆಲ್ಲಿಗುಡ್ಡೆ, ಗೌರವ ಸಲಹೆಗಾರರಾದ ಭುವನೇಶ್ ಪಚ್ಚಿನಡ್ಕ, ರಮೇಶ್ ನಾಯಕ್ ರಾಯಿ ಸಹಕರಿಸಿದರು.