ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರನ್ನು ಮಂಗಳೂರು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ, ಈ ಜಿಲ್ಲೆಯ ಜನರನ್ನು ಕಾಡುತ್ತಿರುವ 9/11 ಸಮಸ್ಯೆ, ಕನ್ವರ್ಷನ್, ವಿನ್ಯಾಸ ನಕ್ಷೆ ಅನುಮೋದನೆ, ಕಟ್ಟಡ ಪರವಾನಿಗೆ ಮೊದಲಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು, ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಸ್ತುತ ಕರಾವಳಿ ಜಿಲ್ಲೆಗಳು ಮೈಸೂರು ವಿಭಾಗಕ್ಕೆ ಸೇರಿದ್ದು, ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಮಂಜೂರಾತಿಗಳು ವಿಳಂಬವಾಗುತ್ತಿದೆ. ಆದ್ದರಿಂದ ಮಂಗಳೂರಿನಲ್ಲಿ ಜಂಟಿ ನಿರ್ದೇಶಕರ ಕಚೇರಿ ಸ್ಥಾಪಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಬೇಡಿಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕರಾದ ಉಡುಪಿ ನಗರಾಭಿವೃದ್ಧಿ ಅಧ್ಯಕ್ಷ ದಿನಕರ್ ಹೇರೂರ್ ಮತ್ತು ಸುಳ್ಯ ನಗರ ಯೋಜ ನ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ, ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ ಸದಸ್ಯ ಶೇಖರ ಪೂಜಾರಿ, ಉಡುಪಿ ಪ್ರಾಧಿಕಾರ ಸದಸ್ಯರಾದ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.