ಸಾರಾಂಶ
ಮಾದಕ ವಸ್ತುಗಳಾದ ಮದ್ಯ, ತಂಬಾಕು, ಗಾಂಜಾ, ಕೋಕೇನ್, ಓಪಿಯಮ್, ಹೆರಾಯಿನ್, ಎಲ್‌ಎಸ್‌ಡಿ, ಮತ್ತು ನಿದ್ದೆ ಮಾತ್ರೆಗಳ ಚಟವು ಮನುಷ್ಯನ ಮೆದುಳಿನ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂದು ಸಿಪಿಐ ಆನಂದ ವಾಗ್ಮೋಡೆ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆಸುರಪುರ
ಮಾದಕ ವಸ್ತುಗಳಾದ ಮದ್ಯ, ತಂಬಾಕು, ಗಾಂಜಾ, ಕೋಕೇನ್, ಓಪಿಯಮ್, ಹೆರಾಯಿನ್, ಎಲ್‌ಎಸ್‌ಡಿ, ಮತ್ತು ನಿದ್ದೆ ಮಾತ್ರೆಗಳ ಚಟವು ಮನುಷ್ಯನ ಮೆದುಳಿನ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂದು ಸಿಪಿಐ ಆನಂದ ವಾಗ್ಮೋಡೆ ಹೇಳಿದ್ದಾರೆ.ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣಿಕೆ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ವಸ್ತು ಸೇವಿಸಲೇಬೇಕೆಂಬ ಅತಿಯಾದ ಆಸೆ, ಮಾನಸಿಕ ಮತ್ತು ದೈಹಿಕವಾಗಿ ಕೆಲವು ವಿಚಿತ್ರ ಲಕ್ಷಣಗಳನ್ನು ಉಂಟು ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ನಡುವಳಿಕೆ ಪೋಷಕರು ಸೂಕ್ಷ್ಮವಾಗಿ ಗಮನಿಸಬೇಕು ಎಂದರು.
ಮಾದಕ ವಸ್ತುಗಳ ಮಾರಾಟ ಕಾನೂನು ವಿರುದ್ಧವಾದುದ್ದು. ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆಯಂತಹ ಚಟುವಟಿಕೆಗಳಲ್ಲಿ ಯುವಕರು ಭಾಗಿಯಾಗಬಾರದು. ಉತ್ತಮ ಅರೋಗ್ಯ ಮತ್ತು ಅಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಮಾದಕ ವಸ್ತುಗಳ ಮಾರಾಟ ತಾಲೂಕಿನಲ್ಲಿ ಎಲ್ಲೇ ಕಂಡು ಬಂದರೂ ನಮಗೆ ತಿಳಿಸಿ. ಪ್ರತಿಯೊಬ್ಬರ ಹೆಡಮುರಿ ಕಟ್ಟಿ ಸ್ವಸ್ಥ ಸಮಾಜದ ನಿರ್ಮಾಣ ಮಾಡುತ್ತೇವೆ ಎಂದು ಅವರು ತಿಳಿಸಿದರು.ಪ್ರಾಚಾರ್ಯರಾದ ಡಾ. ಶರಣಬಸಪ್ಪ ಸಾಲಿ ಸ್ವಾಗತಿಸಿದರು. ಡಾ. ಅಶೋಕ ಪಾಟೀಲ್, ಎಕ್ಸಾಮ್ ಡೀನ್ ಪ್ರೊ. ಶರಣಗೌಡ ಪಾಟೀಲ್, ಅಕಾಡೆಮಿಕ್ ಡೀನ್ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರೊ. ಗಂಗಾಧರ ಹೂಗಾರ ಕಾರ್ಯಕ್ರಮ ನಿರೂಪಿಸಿದರು.