ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಅಥಣಿ ಮೋಟಗಿಮಠದ ಲಿಂ.ಚನ್ನಬಸವ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವ ಹಿನ್ನೆಲೆಯಲ್ಲಿ ಜನವರಿ 10 ರಿಂದ 13ರ ವರೆಗೆ ಸಾಮರಸ್ಯದ ಸಮಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ತಿಳಿಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಜ.10 ರಂದು ಬೆಳಗ್ಗೆ 9 ಗಂಟೆಗೆ ಅಛಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸುವರು. ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಕನ್ನಡ ದ್ವಜಾರೋಹಣ ಮಾಡುವರು. ಅಂದು ಸಂಜೆ 6 ಗಂಟೆಗೆ ಬಸವಚರಿತಾಮೃತ ಪ್ರವಚನ ಮಂಗಲೋತ್ಸವ ನಡೆಯಲಿದೆ. ಕಲಬುರ್ಗಿ ಶ್ರೀಶೈಲಂ ಜಗದ್ಗುರು ಸಾರಂಗಮಠದ ಡಾ.ಜಗದ್ಗುರು ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಮತ್ತು ಬಳ್ಳಾರಿ ಹೊಸಪೇಟೆ ಹಾಲಕೇರಿ ಕೊಟ್ಟೂರು ಸ್ವಾಮಿ ಸಂಸ್ಥಾನಮಠದ ಜಗದ್ಗುರು ಕೊಟ್ಟೂರು ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಇಂಚಲ ಸಾಧುಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಮತ್ತು ಗುಳೇದಗುಡ್ಡ ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಗುರುವಂದನ ಕಾರ್ಯಕ್ರಮ ಜರುಗಲಿದೆ.
11ರಂದು ಬೆಳಗ್ಗೆ 10.30 ಗಂಟೆಗೆ ಚನ್ನಬಸವ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವ ಉದ್ಘಾಟನಾ ಸಮಾರಂಭ ಸುತ್ತೂರು ಜಗದ್ಗುರು ವೀರಸಿಂಹಾಸನ ಸಂಸ್ಥಾನ ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ಧಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ ಮತ್ತು ಗದುಗಿನ ಜಗದ್ಗುರು ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ನೇತೃತ್ವ ವಹಿಸುವರು. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಿವರಾಜ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ಡಾ.ಸಂತೋಷ ಹಾನಗಲ್ ಸಂಪಾದಕತ್ವದ ಮಹಾತ್ಮರ ಚರಿತಾಮೃತ ಅವಲೋಕನ ಕೃತಿಯ ಲೋಕಾರ್ಪಣೆಯನ್ನು ಶಾಸಕ ಲಕ್ಷ್ಮಣ ಸವದಿ ನೆರವೇರಿಸುವರು. ಸಲಿದ್ದಾರೆ. ಇದೇ ಸಂದರ್ಭದಲ್ಲಿ ಲಂಡನ್ ನ ಅಂತರಾಷ್ಟ್ರೀಯ ಬಸವ ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹಾದೇವಯ್ಯ ಅವರಿಗೆ ಬಸವಭೂಷಣ ಪ್ರಶಸ್ತಿ ಮತ್ತು ಜಮಖಂಡಿ ಶಾಸಕ ಜಗದೀಶ ಗುಡಗುಂಟಿಮಠ ಸೇರಿ ಹಲವರಿಗೆ ಸಮಾಜ ಸೇವಾ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವುದು.12 ರಂದು ಬೆಳಗ್ಗೆ 10-30 ಗಂಟೆಗೆ ಗಡಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜೋಶಿ ಉದ್ಘಾಟಿಸುವರು. ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಸಂಗೀತ ಕಾರ್ಯಕ್ರಮ ಜರುಗಲಿದ್ದು, ಕಲಬುರ್ಗಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂ.ಫಕೀರೇಶ ಕಣವಿ, ಖ್ಯಾತ ಗಾಯಕರಾದ ಕುಮಾರ್ ಕಣವಿ ಮತ್ತು ಮಾಲಾಶ್ರೀ ಕಣವಿ ಭಾಗವಹಿಸಲಿದ್ದು, ಪಂಚಾಕ್ಷರಿ ಕಣವಿ ತಬಲಾ ಸಾಥ್ ನೀಡಲಿದ್ದಾರೆ.
13ರಂದು ಬೆಳಗ್ಗೆ 8 ಗಂಟೆಗೆ ಅಥಣೀಶರ ಸೇವಾ ಕಾಯಕದ ಬೆಳ್ಳಿ ಹಬ್ಬದ ನೆನಹಿನಲ್ಲಿ ಹರಗುರು ಚರಮೂರ್ತಿಗಳ ಪಾದಪೂಜೆ ಸಮಾರಂಭ ನಡೆಯಲಿದೆ. ಸಂಜೆ 6 ಗಂಟೆಗೆ ಶ್ರೀ ಗುರುಬಸವೇಶ್ವರ ವಿದ್ಯಾ ವಿಕಾಸ ಸಂಸ್ಥೆಯ ಬೆಳ್ಳಿಹಬ್ಬ ಕಾರ್ಯಕ್ರಮ ನಡೆಯಲಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಸಮಾಜ ಸೇವಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಸಾಮರಸ್ಯದ ಸಮಾಜೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ 101 ಭಕ್ತರಿಗೆ ತುಲಾಭಾರ, 101 ಪೌರಕಾರ್ಮಿಕರಿಗೆ ಗೌರವ ಶ್ರೀರಕ್ಷೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 101 ಗಡಿನಾಡಿನ ಪ್ರತಿಭಾವಂತ ಯುವಕರಿಗೆ ಗೌರವ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ, ಮಹಾಂತ ಸ್ವಾಮೀಜಿ ಉಪಸ್ಥಿತರಿದ್ದರು.