ಶಾಂತಿ ಸುವ್ಯವಸ್ಥೆ ಕದಡಿದರೆ ಕಠಿಣ ಕ್ರಮ: ಜಕ್ಕಣನವರ್

| Published : Aug 26 2024, 01:38 AM IST

ಸಾರಾಂಶ

ಶೃಂಗೇರಿ, ಹಬ್ಬ ಹರಿದಿನದ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ಆಚರಿಸಿಕೊಂಡು ಹೋಗಬೇಕು. ಆಚರಣೆಗಳ ಹೆಸರಲ್ಲಿ ಶಾಂತಿ ಸುವ್ಯವಸ್ಥೆ ಕದಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶೃಂಗೇರಿ ಪೋಲೀಸ್ ಠಾಣ ಪಿಎಸ್ಐ ಎನ್.ಡಿ. ಜಕ್ಕಣನವರ್ ಹೇಳಿದರು.

ಗೌರಿ, ಗಣೇಶ, ಈದ್ ಮಿಲಾದ್ ಹಬ್ಬಗಳ ಪೂರ್ವಭಾವಿ ಶಾಂತಿ ಸಭೆ

ಕನ್ನಡಪ್ರಭ ವಾರ್ತೆ ಶೃಂಗೇರಿ

ಹಬ್ಬ ಹರಿದಿನದ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ಆಚರಿಸಿಕೊಂಡು ಹೋಗಬೇಕು. ಆಚರಣೆಗಳ ಹೆಸರಲ್ಲಿ ಶಾಂತಿ ಸುವ್ಯವಸ್ಥೆ ಕದಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶೃಂಗೇರಿ ಪೋಲೀಸ್ ಠಾಣ ಪಿಎಸ್ಐ ಎನ್.ಡಿ. ಜಕ್ಕಣನವರ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಕುರಿತ ಪೂರ್ವಭಾವಿ ಶಾಂತಿ ಸಭೆಯಲ್ಲಿ ಮಾತನಾಡಿ, ಯಾವುದೇ ರೀತಿಯಲ್ಲಿ ಸಮಾಜದಲ್ಲಿನ ಶಾಂತಿ ಸಾಮರಸ್ಯಕ್ಕೆ ಭಂಗ ಬಾರದಂತೆ ಹಬ್ಬವನ್ನು ಆಚರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವುದು, ಶಾಂತಿ ಸೌಹಾರ್ಧತೆಗೆ ಧಕ್ಕೆ ತರುವಂತಹ ಕೃತ್ಯ ಎಸಗಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗಣಪತಿ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ಧ್ವನಿವರ್ಧಕ ಬಳಸಲು ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಜನರನ್ನು ಕೆರಳಿಸುವ, ಉದ್ರೇಕಿಸುವ ಘೋಷಣೆಗಳಾಗಲಿ, ಕಾರ್ಯಕ್ರಮಗಳಾಗಲೀ ಮಾಡಬಾರದು ಎಂದು ಸೂಚನೆ ನೀಡಿದರು.

ಬ್ಯಾನರ್, ಬಟಿಂಗ್ಸ್ ಗಳಿಗೆ ಅನುಮತಿ ಕಡ್ಡಾಯವಾಗಿದೆ. ಪೋಲೀಸ್ ಇಲಾಖೆ ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸ ಬೇಕು. ಗಣಪತಿ ವಿಸರ್ಜನಾ ಮೆರವಣಿಗೆ ಮಾರ್ಗದ ಮಾಹಿತಿಯನ್ನು ಪೊಲೀಸರಿಗೆ ನೀಡಬೇಕು. ವಿವಾದಿತ ಸ್ಥಳದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಬಾರದು. ಮೈಕ್ ಬಳಕೆ ಸಮಯದ ಮಿತಿ ಕಡ್ಡಾಯವಾಗಿ ಪಾಲನೆ ಮಾಡಬೇಕು. ಅದರ ಜತೆಗೆ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

-----

23 ಶ್ರೀ ಚಿತ್ರ 5- ಶೃಂಗೇರಿ ಪೋಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೂರ್ವಭಾವಿ ಸಭೆ ನಡೆಯಿತು.