ಸಾರಾಂಶ
ಕಾರ್ಯಕ್ರಮದಲ್ಲಿ ಶಾಲೆಗೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಶ್ರೀಪಾದ ಹೆಗಡೆ ಬಕ್ಕೆಮನೆ ಅವರನ್ನು ಸನ್ಮಾನಿಸಲಾಯಿತು.
ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಹಳಿಯಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಗ್ರಾಪಂ ಹಾರ್ಸಿಕಟ್ಟಾ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹಾರ್ಸಿಕಟ್ಟಾ ಮತ್ತು ಸಕಿಪ್ರಾ ಶಾಲೆಯ ಸಹಯೋಗದಲ್ಲಿ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.
ಗ್ರಾಪಂ ಅಧ್ಯಕ್ಷೆ ಹನುಮಕ್ಕ ಭೋವಿ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಪ್ರೇಮಾನಂದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯರಾದ ಅಕ್ಷತಾ ಮಡಿವಾಳ, ಸರೋಜಾ ನಾಯ್ಕ, ಜಿಪಂ ಮಾಜಿ ಸದಸ್ಯ ಎಸ್.ಆರ್. ಹೆಗಡೆ ಕುಂಬಾರಕುಳಿ, ಸಾಮಾಜಿಕ ಕಾರ್ಯಕರ್ತ ಎಸ್.ಎನ್. ಹೆಗಡೆ ಬಕ್ಕೆಮನೆ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ, ಹಳಿಯಾಳ ಮಹಿಷಾಸುರ ಮರ್ಧಿನಿ ದೇವಾಲಯದ ಅರ್ಚಕ ಮಂಜುನಾಥ ನಾಯ್ಕ ಪೂಜಾರ ಹಳಿಯಾಳ, ಸಿಂಗಾರಪ್ರಿಯ ನಾಗಚೌಡೇಶ್ವರಿ ದೇವಾಲಯದ ಅರ್ಚಕ ಅಶೋಕ ನಾಯ್ಕ ಹಳಿಯಾಳ, ಮಂಜುನಾಥ ಮಡಿವಾಳ, ಹಿರಿಯ ಶಿಕ್ಷಕ ಡಿ.ಎಲ್. ಭಾಗ್ವತ್, ಎಚ್.ಎಸ್. ನಾಯ್ಕ, ತಾಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಎನ್. ಹೆಗಡೆ, ನಾಗರಾಜ ನಾಯ್ಕ, ಎಂ.ಜಿ. ನಾಯ್ಕ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿದ್ದರು.ಇದೇ ಸಂದರ್ಭದಲ್ಲಿ ಶಾಲೆಗೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಶ್ರೀಪಾದ ಹೆಗಡೆ ಬಕ್ಕೆಮನೆ ಅವರನ್ನು ಸನ್ಮಾನಿಸಲಾಯಿತು.
ಸಿಆರ್‌ಪಿ ಶೋಭಾ ಡಿ.ಸಿ. ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕ ನಾಗರಾಜ ಮಡಿವಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ನಯನಾ ನಾಯ್ಕ ವಂದಿಸಿದರು. ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.ಸಾಂಕ್ರಾಮಿಕ ಕಾಯಿಲೆಗಳ ಜಾಗೃತಿ ಮೂಡಿಸಿ: ಕ್ಯಾ. ರಮೇಶ ರಾವ್
ಮುಂಡಗೋಡ: ಕೇವಲ ಲಾರ್ವಾ ಸಮೀಕ್ಷೆ ನಡೆಸಿದರೆ ಮಾತ್ರ ಸಾಲದು. ಬದಲಾಗಿ ಸಾರ್ವಜನಿಕರಿಗೆ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಕುರಿತು ಆರೋಗ್ಯ ಶಿಕ್ಷಣ ಕೂಡ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಇಲಾಖೆ ಆಡಳಿತಾಧಿಕಾರಿ ಕ್ಯಾ. ರಮೇಶ ರಾವ್ ಸೂಚಿಸಿದರು.ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪಟ್ಟಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸೊಳ್ಳೆಗಳ ಲಾರ್ವಾ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಪರಿಶೀಲಿಸಿದ ಅವರು, ಈ ಕುರಿತು ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದು ಅವರೇ ಕೆಲ ಮನೆಗಳಿಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸುವ ಮೂಲಕ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ, ಆನೆಕಾಲು ರೋಗ ತಡೆಗಟ್ಟಬೇಕಾದರೆ ಸೊಳ್ಳೆಗಳನ್ನು ನಿಯಂತ್ರಿಸಬೇಕಿದ್ದು, ಸೊಳ್ಳೆಗಳಿಂದ ರಕ್ಷಣೆ ಪಡೆಯುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಹಿರಿಯ ನಿರೀಕ್ಷಣಾಧಿಕಾರಿ ರಾಜು ತಳೇಕರ, ತಾಲೂಕು ಆರೋಗ್ಯಾಧಿಕಾರಿ ಭರತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎನ್.ಎಚ್. ಹಿರೇಮಠ, ತಾಲೂಕು ಹಿರಿಯ ಪ್ರಾಥಮಿಕ ಸುರಕ್ಷತಾಧಿಕಾರಿ ಮರಿಯಮ್ಮ, ಆರೋಗ್ಯ ಶಿಕ್ಷಣಾಧಿಕಾರಿ ಅಶೋಕ ಮುಂತಾದವರು ಉಪಸ್ಥಿತರಿದ್ದರು.