ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವಿಗೆ ಉಡುಪಿ, ಕಾಪು ಮತ್ತು ಬೈಂದೂರು ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.ಉಡುಪಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಅಲ್ಪಸಂಖ್ಯಾತ ಮೋರ್ಚಾ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ನಗರ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡೇನಿಸ್ ಮಸ್ಕರೇನಸ್, ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್ ನಿಟ್ಟೂರು, ವಿಜಯಲಕ್ಷ್ಮಿ ಸರಳೇಬೆಟ್ಟು, ಸಂಪಾವತಿ ಕೊಡಂಕೂರು ಮತ್ತಿತರರು ಇದ್ದರು.
ಬೈಂದೂರಿನ ಮಂಡಲ ಕಚೇರಿಯ ಬಳಿ ನಡೆದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ರಾಘವೇಂದ್ರ ಕುಂದರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಪೂಜಾರಿ, ಉಮೇಶ್ ಶೆಟ್ಟಿ ಕಲ್ಗದ್ದೆ ಮತ್ತಿತರರು ಇದ್ದರು.ಕಾಪುನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಪ್ರ. ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರ. ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತಿತರರು ಇದ್ದರು.