ರಾಜ್ಯದಲ್ಲಿ ಹರ್ಯಾಣ ಸೂಪರ್‌ಸಿಎಂರಿಂದ ಆಳ್ವಿಕೆ: ನಿಖಿಲ್‌ ಕಿಡಿ

| Published : Jul 27 2025, 12:00 AM IST

ರಾಜ್ಯದಲ್ಲಿ ಹರ್ಯಾಣ ಸೂಪರ್‌ಸಿಎಂರಿಂದ ಆಳ್ವಿಕೆ: ನಿಖಿಲ್‌ ಕಿಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕವು ಕನ್ನಡಿಗ ಮುಖ್ಯಮಂತ್ರಿಗೆ ಮತ ಹಾಕಿದ್ದರೂ ಹರ್ಯಾಣದ ಸೂಪರ್‌ ಸಿಎಂ ನಮ್ಮನ್ನು ಆಳುತ್ತಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕರ್ನಾಟಕವು ಕನ್ನಡಿಗ ಮುಖ್ಯಮಂತ್ರಿಗೆ ಮತ ಹಾಕಿದ್ದರೂ ಹರ್ಯಾಣದ ಸೂಪರ್‌ ಸಿಎಂ ನಮ್ಮನ್ನು ಆಳುತ್ತಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ತಮ್ಮ ‘ಎಕ್ಸ್‌’ ಖಾತೆಯಲ್ಲಿ ‘ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಫೇಸ್‌ಬುಕ್‌ ಖಾತೆಯ ಕ್ಯೂಆರ್‌ ಕೋಡ್‌ ಪೋಸ್ಟ್ ಮಾಡಿದ್ದಾರೆ.

ಹರಿಯಾಣದ ಸೂಪರ್ ಸಿಎಂ ನಮ್ಮನ್ನು ಆಳುತ್ತಿದ್ದಾರೆ. ಅವರು ಈಗ ಮಂತ್ರಿಗಳೊಂದಿಗೆ ಮಾತ್ರವಲ್ಲ, ಸರ್ಕಾರದ ಅಧಿಕಾರಿಗಳೊಂದಿಗೂ ಸಭೆ ನಡೆಸುತ್ತಿದ್ದಾರೆ. ನಮ್ಮ ಹೆಮ್ಮೆಯ ಸ್ವಯಂಘೋಷಿತ ಚಾಂಪಿಯನ್ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತವನ್ನು ಸದ್ದಿಲ್ಲದೆ ಹೊರಗುತ್ತಿಗೆ ನೀಡಿದ್ದಾರೆ. ನಮ್ಮ ಹೆಮ್ಮೆ ಎಲ್ಲಿದೆ ಎಂದು ಪ್ರಶ್ನಿಸಿರುವ ನಿಖಿಲ್‌, ಕರ್ನಾಟಕದಲ್ಲಿ ಸುರ್ಜೇವಾಲಾ ಸರ್ಕಾರ ಅಧಿಕಾರ ನಡೆಸುತ್ತಿದೆ ಎಂದು ಟೀಕಿಸಿದ್ದಾರೆ.