ಜನಸೇವೆ ಹೊಣೆ ನಿಭಾಯಿಸುವ ಆತ್ಮಶಕ್ತಿ ಇದೆ: ಗಾಯತ್ರಿ ಸಿದ್ದೇಶ್ವರ

| Published : Apr 12 2024, 01:01 AM IST

ಜನಸೇವೆ ಹೊಣೆ ನಿಭಾಯಿಸುವ ಆತ್ಮಶಕ್ತಿ ಇದೆ: ಗಾಯತ್ರಿ ಸಿದ್ದೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ಅಡುಗೆಯನ್ನು ರುಚಿಕಟ್ಟಾಗಿ ಮಾಡಿ, ಜನರ ಸೇವೆ ಸಮರ್ಪಕವಾಗಿ ನಿಭಾಯಿಸಬಲ್ಲೆ. ಆ ಧೈರ್ಯ ಮತ್ತು ಆತ್ಮಶಕ್ತಿ ನನ್ನಲ್ಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕನ್ನಡ ಪ್ರಭ ವಾರ್ತೆ ಹೊನ್ನಾಳಿ

ಅಡುಗೆಯನ್ನು ರುಚಿಕಟ್ಟಾಗಿ ಮಾಡಿ, ಜನರ ಸೇವೆ ಸಮರ್ಪಕವಾಗಿ ನಿಭಾಯಿಸಬಲ್ಲೆ. ಆ ಧೈರ್ಯ ಮತ್ತು ಆತ್ಮಶಕ್ತಿ ನನ್ನಲ್ಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.

ಪಟ್ಟಣದಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಬಿಜೆಪಿ ಮಂಡಲ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ ಹಿಂದುತ್ವ ಉಳಿಯಬೇಕಾದರೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗುವುದು ಅವಶ್ಯಕ. ನನ್ನನ್ನು ಗೆಲ್ಲಿಸಿದರೆ ನರೇಂದ್ರ ಮೋದಿ ಅವರಿಗೆ ಕಮಲ ಅರ್ಪಿಸಿ, ಲಕ್ಷ್ಮೀ ಎಂಬ ಅನುದಾನವನ್ನು ಜಿಲ್ಲೆಗೆ ತಂದು ದಾವಣಗೆರೆ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಏ.19ರಂದು ಗಾಯತ್ರಿಸಿದ್ದೇಶ್ವರ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ನಾಯಕರಾದ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಗಮಿಸಲಿದ್ದಾರೆ. ಹೊನ್ನಾಳಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಆಗಮಿಸಬೇಕು ಎಂದು ಹೇಳಿದರು.

ಮಾಜಿ ಸಚಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಲೋಕಸಭಾ ಚುನಾವಣೆ ಸಮೀಪದಲ್ಲಿದೆ ಪಕ್ಷದ ಕಾರ್ಯಕರ್ತರು, ಮುಖಂಡರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರನ್ನು ಗೆಲ್ಲಿಸಲು ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ರಾಜ್ಯ ಹಿಂದುಳಿದ ವರ್ಗಗಳ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ಕುಬೇಂದ್ರಪ್ಪ, ಜಿಲ್ಲಾ ಬಿಜೆಪಿ ಅಭ್ಯರ್ಥಿ ರಾಜಶೇಖರ ಮಾತನಾಡಿದರು. ವಿಪ ಮಾಜಿ ಸಚೇತಕ ಡಾ.ಶಿವಯೋಗಿಸ್ವಾಮಿ, ಮುಖಂಡರಾದ ಧನಂಜಯ, ಅನಿಲ್‌ಕುಮಾರ್, ರಾಜನಹಳ್ಳಿ ಶಿವಕುಮಾರ್, ಜಯಮ್ಮ, ಸತೀಶ್, ನಾಗರಾಜ್ ಇತರರು ಉಪಸ್ಥಿತರಿದ್ದರು.

ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ನೆಲಹೊನ್ನೆ ಮಂಜುನಾಥ ನಿರೂಪಿಸಿದರು.

- - - -11ಎಚ್.ಎಲ್.ಐ1:

ಸಮಾರಂಭವನ್ನು ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು. ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಹಲವು ಮುಖಂಡರು ಇದ್ದರು.