ಸಾರಾಂಶ
ರಾಜ್ಯ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಿಂದ ಮೈಸೂರು ಚಲೋ ಹೋರಾಟಕ್ಕೆ ಬೆಂಬಲ ಸೂಚಿಸಲು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡರ ನೇತೃತ್ವದಲ್ಲಿ ಹಾಸನ ಜಿಲ್ಲೆಯಿಂದ ೧೦ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ನಗರದಿಂದ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.
ಕನ್ನಡಪ್ರಭ ವಾರ್ತೆ ಹಾಸನ
ರಾಜ್ಯ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಿಂದ ಮೈಸೂರು ಚಲೋ ಹೋರಾಟಕ್ಕೆ ಬೆಂಬಲ ಸೂಚಿಸಲು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡರ ನೇತೃತ್ವದಲ್ಲಿ ಹಾಸನ ಜಿಲ್ಲೆಯಿಂದ ೧೦ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ನಗರದಿಂದ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು. ಇದೇ ವೇಳೆ ಬಿಜೆಪಿ ನಗರಾಧ್ಯಕ್ಷ ಮಂಜು ಮಾಧ್ಯಮದೊಂದಿಗೆ ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕೈಗೊಂಡಿರುವಂತಹ ಪಾದಯಾತ್ರೆಯನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ರಾಜ್ಯ ಪ್ರಧಾನ ಕಾರ್ಯದಶಿಗಳಾದ ಪ್ರೀತಂ ಜೆ. ಗೌಡ ರವರ ನೇತೃತ್ವದಲ್ಲಿ ನಡೆಯುತ್ತಿದೆ. ಪಾದಯಾತ್ರೆ ಪ್ರಾರಂಭವಾಗಿ ಮಂಡ್ಯ ತಲುಪುತ್ತಿದೆ. ಆವರ ಆಗಮನವನ್ನು ಮಂಡ್ಯದಲ್ಲಿ ಅಭೂತಪೂರ್ವವಾಗಿ ಸ್ವಾಗತಿಸುವ ಮೂಲಕ ರಾಜ್ಯ ಸರ್ಕಾರವನ್ನು ವಿರೋಧಿಸಲಾಗುತ್ತದೆ ಎಂದರು. ಪ್ರೀತಂಗೌಡರ ನೇತೃತ್ವದಲ್ಲಿ ೧೦ ಸಾವಿರಕ್ಕೂ ಹೆಚ್ಚು ಜನರು ಮಂಡ್ಯಕ್ಕೆ ಪ್ರಯಾಣ ಬೆಳೆಸಿದ್ದೇವೆ. ನಾವು ಕೂಡ ಬಿಜೆಪಿ ಮೋರ್ಚಾದ ಗ್ರಾಮಾಂತರ ಮಂಡಲದ ವತಿಯಿಂದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದರು.ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಬಿ.ಎಚ್. ನಾರಾಯಣಗೌಡ ಮಾತನಾಡಿ, ನಮ್ಮ ರೈತ ಮೋರ್ಚಾದಿಂದ ಸುಮಾರು ೩ ಸಾವಿರಕ್ಕೂ ಹೆಚ್ಚು ಜನ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿದೆ. ಅವ್ಯವಹಾರದಲ್ಲಿ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದು ಹಾಗೂ ಎಸ್.ಸಿ.ಎಸ್.ಟಿ ಸಮುದಾಯದ ಹಣವನ್ನು ನುಂಗಿರುವುದರ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಮ್ಮ ವಿರೋಧ ಪಕ್ಷದ ನಾಯಕರಾದಂತಹ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ಜೆಡಿಎಸ್ ಮುಖಂಡರಾದಂತಹ ಎಚ್.ಡಿ. ಕುಮಾರಸ್ವಾಮಿರವರ ಸಮ್ಮುಖದಲ್ಲಿ ಪಾದಯಾತ್ರೆ ನಡೆಯುತ್ತಿದೆ ಎಂದರು. ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ನಮ್ಮ ಹಾಸನ ಜಿಲ್ಲೆಯಿಂದ ರೈತ ಮೋರ್ಚಾದ ಮೂರು ಸಾವಿರಕ್ಕೂ ಹೆಚ್ಚು ಜನರು ಮಂಡ್ಯಕ್ಕೆ ಪ್ರಯಾಣ ಬೆಳೆಸಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ಮಹೇಶ್, ಬಿಜೆಪಿ ಮುಖಂಡರಾದ ಪ್ರೀತಿವರ್ಧನ್, ಹನಮಂತಪುರ ಪ್ರೇಮಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.