ಸಾರಾಂಶ
ಹಾಸನ ಸಂಸದನ ಲೈಂಗಿಕ ಹಗರಣ ರಾಜ್ಯವೇ ತಲೆ ತಗ್ಗಿಸುವ ವಿಚಾರ. ಎನ್‌ಡಿಎ ಅಭ್ಯರ್ಥಿಯ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಪ್ರಶ್ನೆ ಮಾಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ಹಾಸನ ಸಂಸದನ ಲೈಂಗಿಕ ಹಗರಣ ರಾಜ್ಯವೇ ತಲೆ ತಗ್ಗಿಸುವ ವಿಚಾರ. ಎನ್‌ಡಿಎ ಅಭ್ಯರ್ಥಿಯ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಪ್ರಶ್ನೆ ಮಾಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಲೈಂಗಿಕ ಹಗರಣದ ಬಗ್ಗೆ ಕೇಳಲು ದೆಹಲಿಯಿಂದ ಕರೆಗಳ ಮೇಲೆ ಕರೆಗಳು ಬರುತ್ತಿವೆ. ಏನು ಮಾತನಾಡಬೇಕು ಎಂಬುದು ನಮಗೆ ಗೊತ್ತಾಗುತ್ತಿಲ್ಲ. ಇದು ಇಡೀ ರಾಜ್ಯವೇ ತಲೆ ತಗ್ಗಿಸುವ ವಿಚಾರ ಎಂದು ಕಿಡಿಕಾರಿದರು.
ಈ ಬಗ್ಗೆ ನಮಗೆ ಕೇಳುವ ಬದಲು ಎನ್‌ಡಿಎ ಹಾಗೂ ಬಿಜೆಪಿ ನಾಯಕರಿಗೆ ಪ್ರಶ್ನಿಸಬೇಕು. ಶೋಭಾ ಕರಂದ್ಲಾಜೆ, ಬಿ.ಎಸ್. ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಅವರು ಏನು ಹೇಳುತ್ತಾರೆ ಎಂಬುದನ್ನು ಕೇಳಬೇಕು ಎಂದು ಸುದ್ದಿಗಾರರಿಗೆ ಕರೆ ನೀಡಿದರು.