ಸಾರಾಂಶ
ಹೃದಯಾಘಾತದಿಂದ 12 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕುಳಿತಿದ್ದಾಗಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಆಲೂರು: ಹೃದಯಾಘಾತದಿಂದ 12 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕುಳಿತಿದ್ದಾಗಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಚನ್ನಾಪುರ ಗ್ರಾಮದ ನಿವಾಸಿ ಸ್ನೇಹಿತ್ (12 ವರ್ಷ) ಮೃತ ಬಾಲಕ. ಸ್ನೇಹಿತ್, ಚನ್ನಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ತಿಂಡಿ ತಿಂದು ಮನೆಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತವಾಗಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.