• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ
ನಿಸ್ವಾರ್ಥ ಸೇವಾ ಮನೋಭಾವ, ನಮ್ಮೂರು ಎಂಬ ಅಭಿಮಾನ ಹಾಗೂ ಮಕ್ಕಳ ಶೈಕ್ಷಣಿಕ ಏಳಿಗೆಗೆ ಅನಂತ್ ಕುಮಾರ್‌ ಅವರ ದೂರದೃಷ್ಠಿಯ ಕಾರಣದಿಂದ ಹಂಗರಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ ಉತ್ತಮ ಶಾಲೆ ಎಂಬ ಹೆಗ್ಗಳಿಕೆಯ ಜತೆಗೆ ಪ್ರಖ್ಯಾತಿ ಗಳಿಸಿದೆ. ಇಂತಹ ಯಶಸ್ಸಿಗೆ ಕಾರಣಕರ್ತರಾದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಆರ್.ಅನಂತ್ ಕುಮಾರ್ ಅವರಿಗೆ ಅಭಿನಂದನೆಗಳು ಹಾಗೂ ಅವರ ಸ್ನೇಹಿತರ ಕಾರ್ಯ ಶ್ಲಾಘನೀಯವೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಪ್ರಶಂಸಿದರು.
ಅಕ್ರಮ ಲೇಔಟ್ ಕಾಮಗಾರಿ ನಿಲ್ಲಲಿ
೨೦೨೫ ಜನವರಿಯಲ್ಲಿ ೭೩-೩ ಎಕರೆ ಜಾಗವನ್ನು ಮಾಜಿ ಶಾಸಕರೋರ್ವರು ಮತ್ತವರ ತಂಡದವರು ೯೭ ಮಂದಿಗೆ ಅಕ್ರಮವಾಗಿ ಖಾಯಂ ಸಾಗುವಳಿ ಚೀಟಿ ನೀಡಿ ಭೂ ಕಬಳಿಕೆ ಮಾಡಿ, ಲೇಔಟ್ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕಾಗಿ ೨೫ ಎಕರೆ ಖರಾಬು ಜಾಗವನ್ನೂ ಕಬಳಿಸಿ ಅಕ್ರಮವಾಗಿ ಲೇಔಟ್ ಮಾಡುತ್ತಿದ್ದು, ಈ ಕಾಮಗಾರಿ ನಿಲ್ಲಬೇಕು. ಅಲ್ಲಿಯವರೆಗೂ ನಮ್ಮದು ನಿರಂತರ ಕಾನೂನು ಹೋರಾಟ ಇರುತ್ತದೆ. ಇಲ್ಲವಾದರೆ ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ವಕೀಲರಾದ ಎಂ.ಡಿ. ಗೋಪಾಲೇಗೌಡ ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣಕ್ಕೆ ಅನುದಾನ
ಶೀಘ್ರದಲ್ಲಿ ೧೨೦೦ ಕೋಟಿ ರು. ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಲಿದ್ದು, ಕಾಮಗಾರಿ ಪ್ರಾರಂಭವಾಗಿ ಈ ವರ್ಷದ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ತಿಳಿಸಿದ್ದಾರೆ. ಮೂಡಿಗೆರೆ ರಸ್ತೆಯ ಚೀಕನಹಳ್ಳಿಯಿಂದ ಬಾಣಾವರ ಹತ್ತಿರದ ಅರಕೆರೆ ಗ್ರಾಮದವರೆಗೆ ಸುಮಾರು ೧೨೦೦ ಕೋಟಿ ರು.ಗಳ ವೆಚ್ಚದಲ್ಲಿ ೮೦ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ.
ನಾಡಿನ ಸಂಸ್ಕೃತಿ ಸಾರುವಲ್ಲಿ ನಾಟಕಗಳ ಪಾತ್ರ ಮಹತ್ವದ್ದು
ಕನ್ನಡ ನಾಡಿನ ಸಂಸ್ಕೃತಿ, ಸಂಪ್ರದಾಯವನ್ನು ನಾಡಿಗೆ ಸಾರುವಲ್ಲಿ ನಾಟಕಗಳು ಪ್ರಮುಖ ಪಾತ್ರವನ್ನು ವಹಿಸುವ ಜತೆಯಲ್ಲಿ ಉತ್ತಮ ಸಂದೇಶಗಳನ್ನು ತಳಿಸುವ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದೆ ಎಂದು ಕರವೇ ತಾಲೂಕು ಅಧ್ಯಕ ಹೇಮಂತ್ ಕುಮಾರ್ ಹೇಳಿದರು. ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸವನ್ನು ನಾಟಕ ಕ್ಷೇತ್ರ ಮಾಡುತ್ತಾ ಬರುತ್ತಿದೆ. ಕನ್ನಡದ ಮಂದಿ ನಾಟಕಗಳನ್ನು ಹೆಚ್ಚು ವೀಕ್ಷಿಸುವ ಜತೆಯಲ್ಲಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು. ಅಲ್ಲದೇ ತಮ್ಮ ಮಕ್ಕಳನ್ನು ರಂಗಭೂಮಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು.
ಬೇಲೂರಿನ ಕಾಲೇಜು ಮೈದಾನ ಕಬಳಿಸಲು ಬಿಡುವುದಿಲ್ಲ
ಬೇಲೂರು ಪಟ್ಟಣದ ಹೃದಯ ಭಾಗದಲ್ಲಿರುವ ಕಾಲೇಜು ಮೈದಾನವನ್ನು ಕಬಳಿಸಲು ದುಷ್ಟ ಶಕ್ತಿಗಳು ಹಾತೊರೆಯುತ್ತಿದ್ದು, ಯಾವುದೇ ಕಾರಣಕ್ಕೂ ಭೂ ಮಾಫಿಯಾ ಕಳ್ಳರಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಾಸಕ ಎಚ್ ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ಮುಂಭಾಗ ಮತ್ತು ಹಿಂಭಾಗ ಕ್ರೀಡಾಂಗಣ ಮಾಡಿ ಅಲ್ಲಿ ನಿರಂತರ ಚಟುವಟಿಕೆಗಳು ನಡೆಯುತ್ತಿದ್ದರೆ ಆ ಜಾಗ ಅನ್ಯರ ಪಾಲಾಗುವುದು ತಪ್ಪುತ್ತದೆ ಎಂದರು.
ವ್ಯವಹಾರಿಕ ಜ್ಞಾನ ಬೆಳೆಸಿಕೊಳ್ಳಲು ಆಹಾರ ಮೇಳಗಳು ಪೂರಕ
ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿಯೇ ವ್ಯವಹಾರಿಕ ಜ್ಞಾನವನ್ನು ಗಳಿಸಬೇಕು. ಈ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲಿ ಆಯೋಜನೆ ಮಾಡುವ ಆಹಾರ ಮೇಳ ಉತ್ತೇಜಿತವಾಗಿದೆ ಎಂದು ಟೈಮ್ಸ್ ಹಾಸನ ಪಿಯು ಕಾಲೇಜಿನ ಪ್ರಾಂಶುಪಾಲ ನವೀನ್ ಪಿ. ಉಲಿವಾಲ ತಿಳಿಸಿದರು. ವಿದ್ಯಾರ್ಥಿಗಳು ನಿತ್ಯವೂ ನಡೆಯುವ ವ್ಯವಹಾರವನ್ನು ಅವಲೋಕನ ಮಾಡಿದರೆ ಆಹಾರ ಉತ್ಪಾದನೆ, ಬಳಕೆ ಕುರಿತು ಅರಿವನ್ನು ಹೊಂದಬಹುದಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗಿದೆ ಎಂದರು.
ಸಂಸದ ಶ್ರೇಯಸ್‌ ಮೇಲೆ ಶಾಸಕ ಮಂಜು ಮುನಿಸು
ಸಂಸದ ಶ್ರೇಯಸ್ ಪಟೇಲ್ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಶಾಸಕರ ಗೈರಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಅಧೀಕೃತ ಸಭೆ ನಡೆಸಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಭೆ ನಡೆಸಲು ಅನುವು ಮಾಡಿಕೊಟ್ಟ ಅಧಿಕಾರಿಗಳು ಹಾಗೂ ಸಂಸದರ ವಿರುದ್ಧ ಸರ್ಕಾರಕ್ಕೆ ದೂರು ನೀಡಲು ಶಾಸಕ ಮಂಜು ಸಜ್ಜಾಗಿದ್ದಾರೆ. ಅನಾವಶ್ಯಕವಾಗಿ ಸಂವಿಧಾನಕ್ಕೆ ಅಪಚಾರ ಮಾಡುತ್ತಿರುವ ಸಂಸದರ ನಡೆಯ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ
ದಿನದ ೨೪ ಗಂಟೆಗಳ ಕಾಲ ಯಾವಾಗಲೂ ಒತ್ತಡದಲ್ಲಿಯೇ ಕರ್ತವ್ಯ ನಿರ್ವಹಿಸುವ ಪೊಲೀಸರು ಮತ್ತು ಪತ್ರಕರ್ತರಿಗೆ ಕ್ರೀಡೆಗಳು ಮಾನಸಿಕ ಉತ್ಸಾಹ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ನಾಯ್ಡು ತಿಳಿಸಿದರು. ಆಗಾಗ್ಗೆ ನಡೆಯುತ್ತಿದ್ದರೇ ನಮ್ಮೊಳಗಿನ ಬಾಂಧವ್ಯದ ಜೊತೆಗೆ ಆರೋಗ್ಯಕ್ಕೂ ಸಹಕಾರಿಯಾಗುತ್ತದೆ. . ಪೊಲೀಸ್ ಇಲಾಖೆ- ಪತ್ರಕರ್ತರ ಸಂಘದಿಂದ ಸೌಹಾರ್ದಯುತ ಕ್ರಿಕೆಟ್ ಇಂತಹ ಪಂದ್ಯಾವಳಿಗಳ ಆಯೋಜನೆಯಿಂದ ಕ್ರೀಡಾಸಕ್ತಿ ಮತ್ತು ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ ಎಂದರು. ಒಂದು ದಿನದ ಈ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಲಿ ಎಂದು ಇದೇ ವೇಳೆ ಶುಭಹಾರೈಸಿದರು.
ಅನುದಾನ ಕೊರತೆಯಿಂದಾಗಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ
ಅನುದಾನದ ಕೊರತೆಯಿಂದ ರಸ್ತೆಗಳ ಅಭಿವದ್ದಿಯನ್ನು ಒಂದೇ ಬಾರಿ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗಿದ್ದು, ಸಿಕ್ಕ ಅನುದಾನದಲ್ಲಿ ಆದ್ಯತೆ ಮೇರೆಗೆ ಕಾಮಗಾರಿ ಮಾಡಲಾಗುವುದು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು, ಗುಣಮಟ್ಟದ ಕಾಮಗಾರಿಯಿಂದ ಮಾತ್ರ ಸಾರ್ವಜನಿಕರ ಸಮಸ್ಯೆಗೆ ಮುಕ್ತಿ ಸಾಧ್ಯ ಎಂದು ನುಡಿದರು.
ಮಾಹಿತಿ ಇಲ್ಲದೆ ಮಾತನಾಡುವ ಎಂಎಲ್ಸಿ ಸೂರಜ್‌ಗೆ ಬುದ್ಧಿ ಭ್ರಮಣೆಯಾಗಿದೆ
ಮೂರು ವರ್ಷಗಳ ಹಿಂದೆ ಉದ್ಭವ ಮೂರ್ತಿಯಾಗಿ ಕುಟುಂಬದ ಹಿನ್ನೆಲೆಯಿಂದ ರಾಜಕಾರಣಕ್ಕೆ ಬಂದು ವಿಧಾನ ಪರಿಷತ್‌ ಸದಸ್ಯರಾಗಿರುವ ಸೂರಜ್‌ ರೇವಣ್ಣ ಅವರಿಗೆ, ಕೆಲ ವಿಷಯಗಳಲ್ಲಿ ಮಾಹಿತಿ ಕೊರತೆ ಇದೆ. ಹಾಗಾಗಿ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ದೇವರಾಜೇಗೌಡ ದೂರಿದರು. ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ರಾಜಕೀಯಕ್ಕೆ ಉದ್ಭವ ಮೂರ್ತಿಯಾಗಿ ಕಾಲಿಟ್ಟಿದ್ದಾರೆ. ಎಂಎಲ್‌ಸಿ ಅನುದಾನ ಬಿಟ್ಟು ವೈಯಕ್ತಿಕವಾಗಿ ಸರ್ಕಾರದಿಂದ ಎಷ್ಟು ಅನುದಾನ ತಂದಿದ್ದಾರೆ. ಈ ಸಂದರ್ಭದಲ್ಲಿ ಆಸಿಡ್ ದಾಳಿ ಪ್ರಕರಣವನ್ನು ಪ್ರಸ್ತಾಪಿಸುವ ಅಗತ್ಯ ಇರಲಿಲ್ಲ ಎಂದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved