ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿಸುವಲ್ಲಿ ಸರ್ಕಾರಿ ಕಾಲೇಜು ಯಶಸ್ವಿಸರ್ಕಾರಿ ಪ್ರಥಮ ದರ್ಜೆ ಕಾಲೇಜು ತನ್ನ 18 ವರ್ಷಗಳ ಸಾರ್ಥಕ ಸೇವೆಯೊಂದಿಗೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ, ನೈತಿಕತೆ, ಕಲೆ, ಸಾಹಿತ್ಯ ವಿಜ್ಞಾನ ಕ್ರೀಡೆ ಹಾಗೂ ಕಂಪ್ಯೂಟರ್ ಜ್ಞಾನ ಸೇರಿದಂತೆ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ರೂಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎ. ಗೀತಾ ತಿಳಿಸಿದರು.