• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು- ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲು ಸಕಲೇಶಪುರವರೆಗೂ ವಿಸ್ತರಿಸಲು ಮನವಿ

ಬೆಂಗಳೂರು- ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣರವರಿಗೆ ಮನವಿ ಮಾಡಿದ್ದಾರೆ.  

ನಗರನಹಳ್ಳಿ ಪ್ರೌಢಶಾಲೆಗೆ ಸಂಸದ ಶ್ರೇಯಸ್ ಭೇಟಿ
ಹೊಳೆನರಸೀಪುರ ತಾಲೂಕಿನ ನಗರನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಸಂಸದ ಶ್ರೇಯಸ್ ಎಂ.ಪಟೇಲ್ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಸ್ಯೆ ಕುರಿತು ಗಮನ ಸೆಳೆದ ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಸಿಸಿ, ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿ, ಜನರ ನಂಬಿಕೆಗೆ ಧಕ್ಕೆಯಾಗದ ರೀತಿಯಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ.
ರೈತರು ಕೃಷಿ ಜತೆ ಉಪಕಸುಬುಗಳಿಗೂ ಒತ್ತು ನೀಡಿ
ರೈತರು ಕೃಷಿ ಕಾಯಕದ ಜತೆಯಲ್ಲಿ ಆರ್ಥಿಕವಾಗಿ ಮೇಲೆ ಬರಲು ಉಪಕಸುಬುಗಳಿಗೂ ಒತ್ತು ನೀಡುವಂತೆ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಸಲಹೆ ನೀಡಿದರು. ವೈಜ್ಞಾನಿಕತೆ ಬೆಳೆದಂತೆ ಬೆಳೆಗಳಿಗೆ ಹಲವು ರಾಸಾಯನಿಕ ಔಷಧಿಗಳನ್ನು ಸಿಂಪಡಿಸುತ್ತಿದ್ದು ಮನುಷ್ಯನ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಹಿಂದೆ ಕೊಟ್ಟಿಗೆ ಗೊಬ್ಬರ ಸೇರಿದಂತೆ ಇತರೆ ಗೊಬ್ಬರಗಳನ್ನು ಬಳಸಿಕೊಂಡು ಬೆಳೆ ಬೆಳೆಯಲಾಗುತ್ತಿತ್ತು. ಆದರೆ ಇಂದು ಸಾವಯವ ಕೃಷಿ ಮಾಡುವವರು ಕಡಿಮೆಯಾಗಿದ್ದು ಉತ್ತಮ ಬೆಳೆಗಳಿಗಾಗಿ ಸಾವಯವದತ್ತ ಮತ್ತೇ ಮುಖಮಾಡುವಂತೆ ಹೇಳಿದರು.
ಮನಮೋಹನ್‌ ಸಿಂಗ್ ದೇಶದ ಅತ್ಯಮೂಲ್ಯ ಆಸ್ತಿ
ಆರ್ಥಿಕ ಸುಧಾರಣೆಯಲ್ಲಿ ಕ್ರಾಂತಿ ಉಂಟು ಮಾಡಿದವರು, ಈ ದೇಶ ಕಂಡಂತಹ ಅಪರೂಪದ ರಾಜಕಾರಣಿಗಳು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಲೋಕಸಭಾ ಸದಸ್ಯ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು.
ನಿವೃತ್ತ ನೇತ್ರತಜ್ಞ ಶೇಖರ್‌ಗೆ ಬೀಳ್ಕೊಡುಗೆ
ಸರ್ಕಾರಿ ಆಸ್ಪತ್ರೆಯಲ್ಲಿ ನೇತ್ರ ಪರಿವೀಕ್ಷಕರಾಗಿ ಜನಮನ್ನಣೆ ಪಡೆದ ಆರ್‌.ಶೇಖರ್ ಅವರು ವಯೋನಿವೃತ್ತಿಯಾಗಿದ್ದು, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಅವರ ಸೇವೆಯನ್ನ ಸ್ಮರಿಸಿ ಪರಿಷತ್‌ನ ರಾಜ್ಯಾಧ್ಯಕ್ಷ ಸಿ.ಎನ್ ಅಶೋಕ್ ಗೌರವಿಸಿದರು. ತಮ್ಮ ಸೇವಾ ಅವಧಿಯಲ್ಲಿ ಉತ್ತಮ ಕಾರ್ಯವನ್ನು ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಸಹಕಾರದಲ್ಲಿ ಹಲವಾರು ಆರೋಗ್ಯ ಶಿಬಿರಗಳು, ನೇತ್ರ ಪರೀಕ್ಷೆ ಶಸ್ತ್ರಚಿಕಿತ್ಸೆ ಆಯೋಜಿಸಿ ಬಡವರ ಪಾಲಿಗೆ ಸಹಕಾರ ನೀಡಿದ್ದಾರೆ ಎಂದರು.
ಭಾರತವನ್ನು ಆರ್ಥಿಕವಾಗಿ ಬಲಾಢ್ಯಗೊಳಿಸಿದವರು
ದೇಶದ ಅರ್ಥಶಾಸ್ತ್ರಜ್ಞ, ೧೦ ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶವನ್ನು ಆರ್ಥಿಕವಾಗಿ ಬಲಾಢ್ಯಗೊಳಿಸಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ರವರ ಸಾವಿನ ಹಿನ್ನೆಲೆಯಲ್ಲಿ ಪಟ್ಟಣದ ಕೆ.ಆರ್.ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ಪಕ್ಷದಿಂದ ಸಂತಾಪ ಸಭೆ ನಡೆಸಲಾಯಿತು. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಮಾಜಿ ಶಾಸಕ ಸಿ. ಎಸ್. ಪುಟ್ಟೇಗೌಡ, ಮನಮೋಹನ್ ಸಿಂಗ್‌ರವರು ದೇಶದ ಅರ್ಥ ವ್ಯವಸ್ಥೆಯನ್ನು ನಿಭಾಯಿಸಿದ ರೀತಿ ನೋಡಿ ಪಾಶ್ಚಿಮಾತ್ಯ ದೇಶಗಳೇ ಬೆರಗಾಗಿದ್ದವು ಎಂದರು.
ಪತ್ರಕರ್ತ ಸುರೇಶ್‌ ನಿಧನಕ್ಕೆ ಸಂತಾಪ
ಪತ್ರಕರ್ತ ಹಳೇ ಆಲೂರು ಸುರೇಶ್ ರವರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸಂತಾಪ ಸೂಚಿಸಲಾಯಿತು. ಆಲೂರು ಮಿತ್ರ ಪತ್ರಿಕೆಯ ಸಂಪಾದಕರಾಗಿ ಹಾಗೂ ಸ್ಥಳೀಯ ಪತ್ರಿಕೆಯ ವರದಿಗಾರನಾಗಿ ತಮ್ಮ ಅನನ್ಯ ಸೇವೆ ಸಲ್ಲಿಸಿದ್ದರು. ಆದರೆ ಅನಾರೋಗ್ಯ ದಿಂದ ಬಳಲುತ್ತಿದ್ದು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ತಾಲೂಕಿನಲ್ಲಿ ಉತ್ತಮ ಬರವಣಿಗೆಯ ಮೂಲಕ ಮಾಧ್ಯಮ ಬೆಳವಣಿಗೆಯ ಕೊಂಡಿಯಾಗಿದ್ದರು.
ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಅನುದಾನ
ನುಗ್ಗೇಹಳ್ಳಿ ಹೋಬಳಿಯ ಅತ್ತಿಹಳ್ಳಿ ಗ್ರಾಮದ ಶ್ರೀ ದೊಡ್ಡಮ್ಮ ದೇವಾಲಯದ ಮುಂಭಾಗದಿಂದ ಚಿನ್ನೇನಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ಜಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ಹೋಗಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಕೇವಲ ವಿರೋಧ ಪಕ್ಷಗಳ ಶಾಸಕರ ಕೂಗಲ್ಲ ಆಡಳಿತ ಪಕ್ಷದ ಶಾಸಕರೇ ಈ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ ಎಂದು ಟೀಕಿಸಿದರು.
ಮಧುಮೇಹ ಉಚಿತ ತಪಾಸಣೆ ಶಿಬಿರ
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ರೆಡ್‌ಕ್ರಾಸ್ ಭವನದ ಕಟ್ಟಡದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಧುಮೇಹ ಆರೋಗ್ಯ ಸಮಸ್ಯೆಗಳಿಗೆ ವೈದ್ಯ ತಜ್ಞರಿಂದ ಸೂಕ್ತ ಚಿಕಿತ್ಸೆಯ ಸಲಹೆ ಹಾಗೂ ಸಮಾಲೋಚನೆಯು ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ರಕ್ತಪರೀಕ್ಷೆ, ನರ ಹಾಗೂ ಕಣ್ಣಿನ ಪರೀಕ್ಷೆ ಮತ್ತು ಎಚ್.ಬಿ.ಎ.1.ಸಿ, 3 ತಿಂಗಳ ಸರಾಸರಿ ರಕ್ತದ ಸಕ್ಕರೆ ಮಟ್ಟದ ಪರೀಕ್ಷೆಯನ್ನು ಸಾರ್ವಜನಿಕರಿಗೆ ಮಾಡಲಾಯಿತು.
ಎಲ್ಲರಿಗೂ ಶಿಕ್ಷಣ ನೀಡುವ ಕಾನೂನು ಸಹ ಮಾನವ ಹಕ್ಕು
ಮಾನವ ಹಕ್ಕುಗಳಿಂದ ವಂಚಿತರಾಗಿ ವಿಶ್ವದಾದ್ಯಂತ ಕಷ್ಟಕರ ಜೀವನ ನಡೆಸುತ್ತಿದ್ದ ಸಮಯದಲ್ಲಿ ಕೋಟ್ಯಂತರ ನಾಗರಿಕರಿಗೆ ಸಾಮಾಜಿಕ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ವರ್ಣಭೇದ ನೀತಿ, ಮೂಲಭೂತ ಸೌಲಭ್ಯಗಳ ವಂಚನೆ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೂ ಅನ್ವಯಿಸುವಂತೆ ವಿಶ್ವಸಂಸ್ಥೆಯಿಂದ ಮಾನವ ಹಕ್ಕು ನಿಯಮಾವಳಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಯಿತು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ ವಡಿಗೇರಿ ಹೇಳಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved