ಅರಕಲಗೂಡು ಪಪಂ ಮೊದಲ ಬಜೆಟ್ ಪೂರ್ವ ಸಭೆಬಡವರು ಮನೆ ಕಟ್ಟಿಕೊಳ್ಳಲು ನಿವೇಶನ ವಿತರಣೆ, ಕ್ರೀಡಾಂಗಣ ಅಭಿವೃದ್ಧಿ, ಅರ್ಧಕ್ಕೆ ನಿಂತಿರುವ ಯುಜಿಡಿ ಕಾಮಗಾರಿ ಪೂರ್ಣಗೊಳಿಸುವುದು, ಪುರಾತನ ಕೋಟೆ ಕುರುಹುಗಳ ಸಂರಕ್ಷಣೆ, ಪಟ್ಟಣ ಪಂಚಾಯತ್‌ಗೆ ನೂತನ ಕಟ್ಟಡ ನಿರ್ಮಾಣ ಸೇರಿದಂತೆ ಹತ್ತುಹಲವು ಅಭಿವೃದ್ಧಿ ಕಾಮಗಾರಿಗಳ ಕುರಿತು ಬಜೆಟ್ ಪೂರ್ವ ಸಭೆಯಲ್ಲಿ ಸಾರ್ವಜನಿಕರಿಂದ ಸಲಹೆಗಳು ಹರಿದು ಬಂದವು. ಯುಜಿಡಿ ಕಾಮಗಾರಿ ಪೂರ್ಣಗೊಳಿಸುವುದು, ರಸ್ತೆ ಬದಿ ವ್ಯಾಪಾರಿಗಳಿಗೆ ನಿಗದಿತ ಜಾಗ ಗುರುತಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವುದು, ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಿಸುವಂತೆ ಸಲಹೆ ಮಾಡಿದರು.