ಜನರಿಗೆ ಎಲ್ಲಾ ಮೂಲಭೂತ ಸೌಕರ್ಯ ಸಿಗಬೇಕೆಂಬುದು ನನ್ನ ಆಶಯನಗರ, ಪಟ್ಟಣ ಪ್ರದೇಶಗಳ ಜನರಿಗೆ ಮಾತ್ರವಲ್ಲದೆ ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ಬೂದುಕಾಲುವೆ, ಸಿ.ಸಿ.ಚರಂಡಿ ಮತ್ತು ರಸ್ತೆ ಬಳಕೆಗೆ ಸಿಗಬೇಕು ಹಾಗೂ ಇದರಿಂದ ಅಪಾರ ಮಂದಿಗೆ ಅನುಕೂಲ ಆಗಬೇಕು ಎಂಬ ಹಿತದೃಷ್ಟಿಯಿಂದ , ಸಿ.ಸಿ.ಚರಂಡಿ ಮತ್ತು ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಮ್ಮ ಅವಧಿಯಲ್ಲಿ ಇಡೀ ತಾಲೂಕು, ಕ್ಷೇತ್ರದಾದ್ಯಂತ ಗುಣಮಟ್ಟದ ರಸ್ತೆ, ಕುಡಿಯುವ ನೀರು, ಸಮುದಾಯ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಕ್ಷೇತ್ರದ ಜನರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಸಿಗಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.