• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಚೆ ಕೊಪ್ಪಲಲ್ಲಿ ವಿಜೃಂಭಣೆಯ ರಥೋತ್ಸವ
ಜಾತ್ರಾ ಮಹೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ವಿವಿಧ ಕಡೆಗಳಿಂದ ಬಂದ ಸಾವಿರಾರು ಸಂಖ್ಯೆಯ ಭಕ್ತರುಪಾಲ್ಗೊಂಡು ರಥೋತ್ಸವದಲ್ಲಿ ತಮ್ಮ ಸೇವೆ ಸಲ್ಲಿಸಿ ಹರಕೆ ಕಾಣಿಕೆಗಳನ್ನು ದೇವರಿಗೆ ಸಮರ್ಪಿಸುವುದು ಸಂಪ್ರದಾಯ. ಬುಧವಾರ ಮುಂಜಾನೆ ಶ್ರೀಗಳ ದೇವಾಲಯದಲ್ಲಿ ಸುಮಂಗಲಿಯರಿಂದ ಬಾಯಿಬೀಗ ಧಾರಣೆಯ ಹರಕೆಯೊಂದಿಗೆ ಚಂದ್ರಮಂಡಲೋತ್ಸವ ಮತ್ತು ಅಗ್ನಿಕುಂಡ ಸೇವೆ ಧಾರ್ಮಿಕ ಕಾರ್ಯಗಳು ನೆರವೇರಿದ ನಂತರ ಶ್ರೀ ವೀರಭದ್ರೇಶ್ವರ ಸ್ವಾಮಿಯ ಮತ್ತು ಶ್ರೀ ಪಾರ್ವತಮ್ಮಉತ್ಸವಮೂರ್ತಿಗೆ ಮಹಾಮಂಗಳಾರತಿ ನಡೆಯಿತು.
ಸಂವಿಧಾನವನ್ನು ಅರ್ಥಮಾಡಿಕೊಂಡು ಜೀವನ ನಡೆಸಬೇಕು
ಭಾರತದ ಸಂವಿಧಾನವನ್ನು ಪ್ರತಿಯೊಬ್ಬರೂ ಅಭ್ಯಾಸ ಮಾಡುವಂತಾಗಬೇಕು. ನಿತ್ಯ ಅಂಬೇಡ್ಕರ್ ಅವರ ತತ್ತ್ವಗಳನ್ನು ಅನುಸರಿಸುವ ಮೂಲಕ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು. ಜಾತೀಯತೆ ತೊಲಗಿ ಮಾನವೀಯ ಮೌಲ್ಯಗಳನ್ನು ಪ್ರವರ್ಧಮಾನಕ್ಕೆ ತರಬೇಕು ಎಂದು ಹೇಳಿದರು. ತಾಲೂಕು ಮಿನಿವಿಧಾನ ಸೌಧದ ಆವರಣದಲ್ಲಿ ೧೨ ಅಡಿ ಎತ್ತರದ ಕಂಚಿನ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲು ಎಲ್ಲ ಸಿದ್ಧತೆ ನಡೆದಿವೆ. ಪ್ರತಿಮೆಯ ನಿರ್ಮಾಣ ಕಾರ್ಯ ಕೂಡ ಮುಕ್ತಾಯಗೊಂಡಿದೆ. ಇದಕ್ಕೆ ಬೇಕಾದ ಅಡಿಪಾಯ ವನ್ನು ಪುರಸಭೆ ವತಿಯಿಂದ ಮಾಡಲಾಗುವುದು ಎಂದರು.
ಬೆಲೆ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ
ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುವ ನೈತಿಕತೆಯನ್ನು ಸಂಪೂರ್ಣ ಕಳೆದುಕೊಂಡಿದ್ದು, ಜನರ ಕಣ್ಣೊರೆಸುವ ನಾಟಕ ಮಾಡುತ್ತಿದ್ದಾರೆ. ಒಂದೆಡೆ ದಿನನಿತ್ಯ ದುಡಿದು ತಿನ್ನುವ ಅಸಂಘಟಿತ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಸ್ಥರು, ಶ್ರಮಜೀವಿಗಳ ಆದಾಯ ವ್ಯಾಪಕವಾಗಿ ಕುಸಿಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ಬೆಲೆ ಏರಿಕೆ ನೀತಿಗಳನ್ನು ಕೈಬಿಡಬೇಕೆಂದು ಆಗ್ರಹಿಸಿದರು.
ನಗರಸಭೆ ಉಪಾಧ್ಯಕ್ಷೆಯಾಗಿ ಹೇಮಾಲತಾ ಅವಿರೋಧ ಆಯ್ಕೆ
ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯ ತೀರ್ಮಾನದಂತೆ ಹೇಮಲತಾ ಕಮಲ್ ಕುಮಾರ್ ಅವರನ್ನ ಅಭ್ಯರ್ಥಿಯನ್ನಾಗಿ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಅದರಂತೆ ಎಲ್ಲ ಸದಸ್ಯರ ಸಮ್ಮುಖದಲ್ಲಿ ಹೇಮಲತಾ ಅವರು ಎರಡು ಸೆಟ್ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲಾಯಿತು.
ರಕ್ತದಾನ ಮಾಡಿ ಪ್ರಾಣ ಉಳಿಸಿ
ರಕ್ತದಾನದಿಂದ ಹಲವು ಪ್ರಯೋಜಗಳಿವೆ. ಒಂದು ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನ ಅತ್ಯಂತ ಪ್ರಾಮುಖ್ಯತೆ ಪಡೆಯುತ್ತದೆ. ಇತ್ತೀಚಿನ ದಿನದಲ್ಲಿ ಹೆಚ್ಚು ಅಪಘಾತಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಕ್ತದಾನದ ಬಗ್ಗೆ ಹೆಚ್ಚು ಜಾಗೃತಿಯನ್ನು ಮೂಡಿಸುವ ಅವಶ್ಯವಿದೆ. ಸದೃಢವಾಗಿರುವ ಮನುಷ್ಯ ೧೮ರಿಂದ ೬೦ ವರ್ಷ ಒಳಗಿನ ವ್ಯಕ್ತಿ ವರ್ಷದಲ್ಲಿ ಮೂರು ಬಾರಿ ರಕ್ತದಾನ ಮಾಡಬಹುದು. ತಪ್ಪು ಕಲ್ಪನೆಗಳಿಂದ ಹೊರ ಬಂದು ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದರು.
ಸಿದ್ಧಗೊಂಡರೂ ಲೋಕಾರ್ಪಣೆ ಭಾಗ್ಯವಿಲ್ಲದ ರಾಜಗೋಪುರ
ಕಳೆದ ಐದು ವರ್ಷದಿಂದ ರಾಜಗೋಪುರ ಪೂರ್ಣಗೊಂಡಿದ್ದರೂ ಸಹ ಲೋಕಾರ್ಪಣೆಗೆ ಮುಂದಾಗಿಲ್ಲ, ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣವಾಗಿರುವ ಯಾತ್ರಿ ನಿವಾಸ ಕಟ್ಟಡದ್ದು ಇದೇ ಸ್ಥಿತಿ, ಈಗಾಗಲೇ ರಾಜಗೋಪುರ ಬಣ್ಣ ಕಳೆದುಕೊಳ್ಳುತ್ತಿದೆ. ಶಾಸಕರು ಯಾಕೋ ಏನೋ ಮುಖ್ಯಮಂತ್ರಿಗಳಿಂದಲೇ ಲೋಕಾರ್ಪಣೆ ಮಾಡಿಸಬೇಕೆಂಬ ಬಯಕೆ ಇದ್ದರೂ ಸಹ ಅದಕ್ಕಾಗಿ ಇಷ್ಟು ದಿನ ಕಾಯಬೇಕಿರಲಿಲ್ಲ, ಹುಳಿಯಾರ್ ರಸ್ತೆಯಲ್ಲಿ ತಿರುಪತಿಗೆ ಹೋಗುವ ತಿರುವಿನಲ್ಲಿ ಪ್ರವೇಶ ದ್ವಾರ ನಿರ್ಮಾಣ ಮಾಡಿಸಬೇಕೆಂಬುದು ಭಕ್ತರ ಬೇಡಿಕೆಯಾಗಿದೆ.
ಮಾಜಿ ಸೈನಿಕರ ಸಮಿತಿ ಅಧ್ಯಕ್ಷರಾಗಿ ಪಿ. ಸಾಗರ್ ಆಯ್ಕೆ
ಇತ್ತೀಚೆಗೆ ನಗರದಲ್ಲಿ ನಡೆದ ಜಿಲ್ಲಾ ಮಾಜಿ ಸೈನಿಕರ ಸಮನ್ವಯ ಸಮಿತಿಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ. ಸಾಗರ್ ಹಾಗೂ ಗೌರವಾಧ್ಯಕ್ಷರಾಗಿ ಬಿ. ದೊರೆರಾಜು ಹಾಗೂ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಆಶ್ರಯ ನಿವೇಶನಕ್ಕೆ ಖಾತೆ ಮಾಡಿಕೊಡುವಂತೆ ಪ್ರತಿಭಟನೆ
ವಸತಿ ಹೀನರಿಗೆ ಆಶ್ರಯ ನಿವೇಶನ ಕೊಟ್ಟು ಮೂರು ವರ್ಷಗಳಾದರೂ ಖಾತೆ ಮಾಡಿಕೊಡದಿರುವುದನ್ನು ಖಂಡಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಡಾ ಸರೋಜಿನಿ ಮಹಿಷಿ ಚಳವಳಿ ಹೋರಾಟಗಾರರಾದ ಡಾ.ಎಸ್ ರಾಘವೇಂದ್ರ ಗೌಡ ನೇತೃತ್ವದಲ್ಲಿ ಇಲ್ಲಿನ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಗ್ರಾಮ ದೇವತೆ ಶ್ರೀ ದೊಡ್ಡಮ್ಮ,ಚಿಕ್ಕಮ್ಮದೇವಿ ರಥೋತ್ಸವ
ತಾಲೂಕಿನ ಗಂಡಸಿ ಗ್ರಾಮದ ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಮತ್ತು ಚಿಕ್ಕಮ್ಮದೇವಿಯವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮ ವಿಜೃಂಭಣೆಯಿಂದ ನೆರವೇರಿತು.
ವಕ್ಫ್‌ ಕಾಯ್ದೆ ತಿದ್ದುಪಡಿ ಖಂಡಿಸಿ ಬೇಲೂರಲ್ಲಿ ಪ್ರತಿಭಟನೆ
ಕೇಂದ್ರ ಸರ್ಕಾರ ವಕ್ಛ್ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಖಂಡಿಸಿ ತಾಲೂಕಿನ ವಿವಿಧ ಮುಸ್ಲಿಂ ಮಸೀದಿಗಳ ಒಕ್ಕೂಟದಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved