ನುಗ್ಗೇಹಳ್ಳಿಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ, ಶ್ರೀ ವೇಣುಗೋಪಾಲಸ್ವಾಮಿ, ಶ್ರೀ ಸೌಮ್ಯ ಚೆನ್ನಕೇಶವ ಸ್ವಾಮಿ ದೇವರುಗಳಿಗೆ ವಿಶೇಷ ಪೂಜೆ, ಅಭಿಷೇಕ, ಹೂವಿನ ಅಲಂಕಾರ ಸೇರಿದಂತೆ ವಿವಿಧ ಪೂಜೆಗಳು ನೆರವೇರಿದವು. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅವರ ಉತ್ಸವ ನಡೆಯಿತು. ರಥವನ್ನು ಹೂವಿನ ಅಲಂಕಾರಗಳಿಂದ ಸಿದ್ಧಗೊಳಿಸಲಾಯಿತು. ಉತ್ಸವದ ನಂತರ ರಥದ ಸುತ್ತ ದೇವರನ್ನು ಪ್ರದಕ್ಷಿಣೆ ನಡೆಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ವಿಧಿವಿಧಾನಗಳು ನೆರವೇರಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ಹಣ್ಣುದವನ ಅರ್ಪಿಸುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿದರು.