ಬೆಲೆ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆಬೆಲೆ ಏರಿಕೆಯ ವಿರುದ್ಧ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುವ ನೈತಿಕತೆಯನ್ನು ಸಂಪೂರ್ಣ ಕಳೆದುಕೊಂಡಿದ್ದು, ಜನರ ಕಣ್ಣೊರೆಸುವ ನಾಟಕ ಮಾಡುತ್ತಿದ್ದಾರೆ. ಒಂದೆಡೆ ದಿನನಿತ್ಯ ದುಡಿದು ತಿನ್ನುವ ಅಸಂಘಟಿತ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಸ್ಥರು, ಶ್ರಮಜೀವಿಗಳ ಆದಾಯ ವ್ಯಾಪಕವಾಗಿ ಕುಸಿಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ಬೆಲೆ ಏರಿಕೆ ನೀತಿಗಳನ್ನು ಕೈಬಿಡಬೇಕೆಂದು ಆಗ್ರಹಿಸಿದರು.