ಶಿವಲಿಂಗೇಗೌಡ ₹65 ಕೋಟಿ ಹಂಚಿಕೆ ಎಸ್‌ಐಟಿ ತನಿಖೆ ಮಾಡಿ ದಲಿತ ಸಮುದಾಯದವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ 65 ಕೋಟಿ ರು. ಹಂಚಿಕೆ ಮಾಡುವ ಸಂಬಂಧ ಆಪ್ತರ ಜೊತೆ ಮಾತನಾಡಿದ್ದ ಆಡಿಯೋ ಎಲ್ಲಾ ಕಡೆ ವೈರಲ್ ಆಗಿದ್ದರೂ, ಎಸ್‌ಐಟಿ ರಚಿಸಿ ತನಿಖೆ ಏಕೆ ಮಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಜಿ. ದೇವರಾಜೇಗೌಡ ಪ್ರಶ್ನಿಸಿದರು.