• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಗಿಯದ ನಗರಸಭೆ ಅಧ್ಯಕ್ಷಗಿರಿ ಜಟಾಪಟಿ
ಹಾಸನ ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಮಾಡಲು ತುರ್ತಾಗಿ ವಿಶೇಷ ಸಾಮಾನ್ಯ ಸಭೆಯನ್ನು ಕರೆಯುವಂತೆ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯರು ಸಾಮೂಹಿಕವಾಗಿ ಸೋಮವಾರ ನಗರಸಭೆಗೆ ಟಪಾಲ್ ಮೂಲಕ ಮನವಿ ನೀಡಿದ್ದಾರೆ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಶೇಷ ತುರ್ತು ಸಭೆಯನ್ನು ಕರೆದು ಹಾಲಿ ಹಾಸನ ನಗರಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ನೀಡುವಂತೆ " ಈ ಮೂಲಕ ಕೋರುತ್ತೇವೆ ಎಂದು ಬರೆದಿದೆ.
ಕಂದಾಯ ಕಟ್ಟದ ಪುರಸಭೆ ಮಳಿಗೆಗಳಿಗೆ ಬೀಗ
ಬೇಲೂರು ಪಟ್ಟಣದ ಅಭಿವೃದ್ಧಿಗೆ ಪುರಸಭೆಗೆ ಬರುವ ಕಂದಾಯದ ಹಣ ಅತಿ ಮುಖ್ಯವಾಗಿದ್ದು, ಸಾರ್ವಜನಿಕರು ತಪ್ಪದೇ ಕಂದಾಯ ಪಾವತಿಸುವಂತೆ ಪುರಸಭೆ ಅಧ್ಯಕ್ಷ ಎ. ಆರ್‌. ಅಶೋಕ್ ಮನವಿ ಮಾಡಿದರು. ವ್ಯಾಪಾರ ವಹಿವಾಟು ನಡೆಸುವ ಖಾಸಗಿ ಹಾಗೂ ಪುರಸಭೆಯ ಮಳಿಗೆಯ ಕೆಲ ಅಂಗಡಿಗಳಲ್ಲಿ ಹಲವಾರು ವರ್ಷಗಳಿಂದ ಕಂದಾಯ ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಅಂಗಡಿಗಳಿಗೆ ಅಧ್ಯಕ್ಷರ ನೇತೃತ್ವದಲ್ಲಿ ಬಾಗಿಲು ಹಾಕಿಸಿ ಬೀಗ ಹಾಕಲಾಯಿತು‌.
ಅಬಕಾರಿ ಅಧಿಕಾರಿಗಳ ಮಾರ್ಗದರ್ಶನದಲ್ಲೇ ಅಕ್ರಮ ಮದ್ಯ ಮಾರಾಟ
ಅಬಕಾರಿ ಅಧಿಕಾರಿಗಳ ಮಾರ್ಗದರ್ಶನದಂತೆ ತಾಲೂಕಿನ ಪ್ರತಿ ಗ್ರಾಮದಲ್ಲೂ ಅಕ್ರಮ ಮದ್ಯ ಮಾರಾಟ ನಿರಾತಂಕವಾಗಿ ನಡೆಯುತ್ತಿದೆ ಎಂದು ಶಾಸಕ ಎಚ್. ಕೆ ಸುರೇಶ್ ಕಿಡಿಕಾರಿದರು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ತುಂಬಲು ಅಕ್ರಮ ಮದ್ಯದ ಮಾರಾಟಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಇದರಿಂದ ಜನರ ನೆಮ್ಮದಿ ಹಾಳಾಗುವ ಜೊತೆಗೆ ಅನಾರೋಗ್ಯದಿಂದ ಸಾವನ್ನಪ್ಪುತ್ತಿದ್ದಾರೆ ಎಂದು ಬೇಸರ ಹೊರಹಾಕಿದರು.
ಕ್ರೀಡಾಕೂಟದ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ
ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕ್ರಿಕೆಟ್ ಕ್ರೀಡಾಕೂಟ ಲಾಂಛನವು, ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಹೊಯ್ಸಳ ಶಿಲ್ಪಕಲೆಯ ತವರೂರು, ಗೊಮ್ಮಟನ ನೆಲೆಬೀಡು ಎನ್ನುವುದನ್ನು ಪ್ರತಿನಿಧಿಸುತ್ತದಲ್ಲದೆ. ಮಲೆನಾಡು, ಅರೆ ಮಲೆನಾಡು, ಬಯಲುಸೀಮೆಯ ಸೊಗಡನ್ನು ಪ್ರತಿಬಿಂಬಿಸುವಂತಿದೆ.
ವಿವಿಧ ದೇವಾಲಯಗಳಲ್ಲಿ ರಾಮನವಮಿ ವಿಶೇಷ ಪೂಜೆ
ಹೊಳೆನರಸೀಪುರ ಪಟ್ಟಣದ ಕೋಟೆ ಶ್ರೀ ಚತುರ್ಭುಜ ಪಟ್ಟಾಭಿರಾಮ ದೇವಾಲಯ, ಶ್ರೀ ರಘುಪತಿ ದೇವಾಲಯ, ದೇವಾಂಗ ಬಡಾವಣೆಯ ಶ್ರೀ ರಾಮಮಂದಿರ, ಆರ್‍ಯ ಈಡಿಗರ ಶ್ರೀ ರಾಮಮಂದಿರ, ಕುರುಹಿನಶೆಟ್ಟಿ ಶ್ರೀ ರಾಮಮಂದಿರ, ಹಾಗೂ ಶ್ರೀ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಶ್ರೀ ರಾಮನವಮಿ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಸೀತಾ, ರಾಮ, ಲಕ್ಷ್ಮಣ ಹಾಗೂ ಶ್ರೀ ಆಂಜನೇಯಸ್ವಾಮಿಯ ಮೂಲಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಮಾಡಲಾಗಿತ್ತು.
ಕಾಂಗ್ರೆಸ್‌ ಭ್ರಷ್ಟತೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ, ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ, ಎಸ್‌ಸಿ, ಎಸ್‌ಟಿ ಅನುದಾನದ ದುರ್ಬಳಕೆ ಹಾಗೂ ೧೮ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ವಿರೋಧಿಸಿ ಮಂಗಳವಾರ ಪಕ್ಷದ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್, ಮೇಲ್ಮನೆ ವಿರೋಧ ಪಕ್ಷದ ನಾಯಕರಾದಂತಹ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಮುಖಂಡರ ನೇತೃತ್ವದಲ್ಲಿ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇದ್ರ ತಿಳಿಸಿದರು. ೧೮ ಜನ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ಮಾಡಿರುವ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.
ಸೀತರಾಮಾಂಜನೇಯ ದೇವಸ್ಥಾನದಲ್ಲಿ ರಾಮನವಮಿ ಪೂಜೆ
ಶ್ರೀರಾಮನವಮಿ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದಲ್ಲಿ ಭಾನುವಾರ ಬೆಳಗಿನಿಂದ ವಿವಿಧ ಪೂಜೆ ಹಾಗೂ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಬೆಳಗಿನಿಂದಲೇ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ಸೀತರಾಮಾಂಜನೇಯ ಸೇವಾ ಸಮಿತಿ ಉಪಾಧ್ಯಕ್ಷ ಎಂ.ಎನ್. ಪಾಂಡುರಂಗ ಮಾಧ್ಯಮದೊಂದಿಗೆ ಮಾತನಾಡಿ, ಈ ದೇವಸ್ಥಾನದಲ್ಲಿ ಕಳೆದ ೪೫ ವರ್ಷಗಳಿಂದಲೂ ವಿಶೇಷವಾದಂತಹ ರಾಮೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆದುಕೊಂಡು ಬರುತ್ತಿದೆ ಎಂದರು.
ನುಗ್ಗೇಹಳ್ಳಿ ಗ್ರಾಪಂ ವತಿಯಿಂದ ಬಾಬೂಜೀ ಜಯಂತಿ
ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ್ ರಾಮ್ ರವರು ಈ ದೇಶ ಕಂಡ ಅತ್ಯುತ್ತಮ ನಾಯಕರಾಗಿದ್ದು, ಅವರ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಗೌರವಿಸಿ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವರಾಮ್ ಹೇಳಿದರು. ಹೋಬಳಿ ಕೇಂದ್ರದ ಗ್ರಾಮ ಪಂಚಾಯತಿ ವತಿಯಿಂದ ಮಾಜಿ ಉಪಪ್ರಧಾನಿ, ರಾಷ್ಟ್ರನಾಯಕ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜನ್ಮ ದಿನವನ್ನು ಆಚರಿಸಲಾಯಿತು. ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಪೂಜೆ ಸಲ್ಲಿಸಲಾಯಿತು.
ಪ್ರಸ್ತುತ ಸಮಾಜಕ್ಕೆ ಜಗಜೀವನ್‌ರಾಂ ಆದರ್ಶಗಳ ಅಗತ್ಯವಿದೆ
ಸಾಮಾಜಿಕ ಬದಲಾವಣೆಯ ಹರಿಕಾರರಾಗಿದ್ದ ಬಾಬು ಜಗಜೀವನ ರಾಮ್ ಅವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ ಎಂದು ತಹಸೀಲ್ದಾರ್‌ ಸೌಮ್ಯ ಅವರು ತಿಳಿಸಿದರು. ಅಂದು ಉಂಟಾಗಿದ್ದ ಬರಗಾಲದ ಸಮಯದಲ್ಲಿ ತೀವ್ರ ಆಹಾರ ಬಿಕ್ಕಟ್ಟನ್ನು ಪರಿಹರಿಸುವ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ಜಗಜೀವನ್ ರಾಮ್ ಅವರು ನಿರ್ವಹಿಸಿದ್ದಾರೆ. ಇದರ ಫಲವಾಗಿ ಇಂದು ಆಹಾರದ ಸಮಸ್ಯೆ ಉಲ್ಬಣಗೊಳ್ಳದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಅರಸೀಕೆರೆ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನವಮಿ
ರಾಮನವಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ನವಗ್ರಹ ಪೂಜೆ ಸೂರ್ಯ ನಮಸ್ಕಾರ ರಾಮಾಯಣ ಪಾರಾಯಣ ಪಠಣ ಶ್ರೀ ಸೀತಾರಾಮರಿಗೆ ಪಂಚಾಮೃತ ಅಭಿಷೇಕ ಅಷ್ಟಾವಧಾನ ಮಹಾಮಂಗಳಾರತಿ ನೆರವೇರಿತು. ತಾಲೂಕು ಬ್ರಾಹ್ಮಣ ಸಂಘ ವಿಪ್ರ ನೌಕರರ ಸಂಘ ಸೀತಾ ಮಹಿಳಾ ಸಂಘ ಯುವಕ ಸಂಘ ಮತ್ತು ಯಾಜ್ಞವಲ್ಕ ಸಂಘ ಹಾಗೂ ಪಾಕ ತಜ್ಞರ ಸಂಘದ ಪದಾಧಿಕಾರಿಗಳು ಸದಸ್ಯರುಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved