ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶಕ್ಕೆ ದಶಸೂತ್ರಈ ಬಾರಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭೂತಪೂರ್ವ ಫಲಿತಾಂಶಕ್ಕೆ ಶಿಕ್ಷಣ ಇಲಾಖೆ ವತಿಯಿಂದ ದಶ ಸೂತ್ರಗಳನ್ನು ಅಳವಡಿಸಲಾಗಿದ್ದು, ಶಿಕ್ಷಕರು ಸಹಕರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಕೆ. ಪಾಂಡು ತಿಳಿಸಿದರು. ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಲ್ಲಾ ಶಾಲೆಗಳಲ್ಲೂ ಈ ಬಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜು ಗೊಳಿಸಲಾಗುತ್ತಿದ್ದು, ಈ ಬಾರಿಯ ಫಲಿತಾಂಶದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.