ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಮಹಾರಥೋತ್ಸವ ಸಂಪನ್ನರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ತಾಲೂಕಿನ ಯಾದಪುರದ ಶ್ರೀ ಜೇನುಕಲ್ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಶನಿವಾರ ಬೆಳಗಿನ ಜಾವದಿಂದಲೇ ರಾಜ್ಯದ ಬೆಂಗಳೂರು, ಮೈಸೂರು, ಹಾಸನ, ದಾವಣಗೆರೆ, ಹರಿಹರ, ಧಾರವಾಡ, ಹುಬ್ಬಳ್ಳಿ ಮಹಾನಗರಗಳು ಸೇರಿದಂತೆ ವಿವಿಧ ಕಡೆಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದರು. ರಥೋತ್ಸವದಲ್ಲಿ ಪಾಲ್ಗೊಂಡು ಮಹಾರಥೋತ್ಸವದಲ್ಲಿ ತಮ್ಮ ಸೇವೆ ಸಲ್ಲಿಸಿ ಹರಕೆ, ಕಾಣಿಕೆಗಳನ್ನು ದೇವರಿಗೆ ಸಮರ್ಪಿದರು.