• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ್ಮಿನರಸಿಂಹಸ್ವಾಮಿ ಪಲ್ಲಕ್ಕಿ ಪೂಜಾ ಮಹೋತ್ಸವ
ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಬ್ರಹ್ಮ ರಥೋತ್ಸವ ಪ್ರಯುಕ್ತ ವಿಶೇಷ ಪಲ್ಲಕ್ಕಿ ಪೂಜಾ ಮಹೋತ್ಸವ ನಡೆಯಿತು. ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ದೇವಾಲಯದಲ್ಲಿ ಸೋಮವಾರ ಮುಂಜಾನೆ ಶ್ರೀಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇಧ್ಯ, ತಥಿ ಆರಾಧನೆ ಸೇವೆ, ಸಹಸ್ರನಾಮಾರ್ಚನೆ, ಮಂಗಳಾರತಿ ನೆರವೇರಿಸಿದ ನಂತರ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಉತ್ಸವದ ಅಡ್ಡೆಯಲ್ಲಿ ಪ್ರತಿಷ್ಠಾಪಿಸಿ, ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಅರಕಲಗೂಡು ಕೃಷ್ಣೇಗೌಡರತ್ತ ವಾಲಿದ ಉಸ್ತುವಾರಿಗಳು
ವಿಧಾನಸಭಾ ವ್ಯಾಪ್ತಿಯ ಬೂತ್ ಮುಖಂಡರು, ಕಾರ್ಯಕರ್ತರಗಳ ಸಭೆಯನ್ನು ಆಯೋಜನೆ ಮಾಡಿ ಉಸ್ತುವಾರಿಗಳ ಆಗಮನಕ್ಕೆ ಕಾಯುತ್ತಿರುವುದು ಕಂಡುಬಂದಿತು. ಆದರೆ ಜಿಲ್ಲಾ ಉಸ್ತುವಾರಿ ಎನ್.ಸಂಪಂಗಿ ಮತ್ತು ವಿಧಾನಸಭಾ ಉಸ್ತುವಾರಿ ಸಾಹಿದ್ ತೆಕ್ಕಲ್ ಅವರು ಒಂದು ಗಂಟೆ ಮುಂಚಿತವಾಗಿ ಪಟ್ಟಣದ ಪ್ರವಾಸಿಮಂದಿರಕ್ಕೆ ಆಗಮಿಸಿ ಮತ್ತೋರ್ವ ಬಂಡಾಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ.ಟಿ.ಕೃಷ್ಣೇಗೌಡ ಮತ್ತು ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಲೋಪಗಳಾಗದಂತೆ ಎಚ್ಚರ ವಹಿಸಿ
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಮಕ್ಕಳು ಶೇ.೯೦ರಷ್ಟು ಉತ್ತಮ ಫಲಿತಾಂಶ ಪಡೆದಿದ್ದಾರೆ, ಮುಖ್ಯ ಪರೀಕ್ಷೆಯಲ್ಲಿಯೂ ಮೂರನೇ ಸ್ಥಾನದೊಳಗೆ ಬರುತ್ತೇವೆ ಎಂಬ ಭರವಸೆಯಿದೆ. ಹಿಂದಿನ ವರ್ಷಕ್ಕಿಂತಲೂ ಈ ಬಾರಿ ಶಿಕ್ಷಕರು ಹೆಚ್ಚು ಪರಿಶ್ರಮ ಹಾಕಿದ್ದೀರಿ, ಖಂಡಿತ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ ಎಂದರಲ್ಲದೆ, ಹೆಚ್ಚಿನ ಶ್ರಮ ಹಾಕಿ ಮಕ್ಕಳ ಏಳಿಗಾಗಿ ಶ್ರಮಿಸಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುವುದು ಎಂದರು.
ಟೆಂಡರ್‌ ಕರೆಯುವ ಮುನ್ನ ಪ್ರಚಾರ ಮಾಡಿಲ್ಲವೆಂದು ಸ್ಥಳೀಯ ನಿವಾಸಿಗಳ ಪ್ರತಿಭಟನೆ
ವಾರದ ಸಂತೆ ಮತ್ತು ದಿನವಹಿ ಮಾರುಕಟ್ಟೆ ಹರಾಜು ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಪಟ್ಟಣ ಪಂಚಾಯತ್‌ ಅಧ್ಯಕ್ಷೆ ತಾಹಿರಾ ಬೆಂಗಂ ಪ್ರತಿಭಟನಾಕಾರರಿಗೆ ಹೇಳಿದರು. ಪ್ರತಿವರ್ಷ ಸಂತೆ, ದಿನವಹಿ ಮಾರುಕಟ್ಟೆ ಹರಾಜು ಮಾಡುವ ಮುನ್ನ ಹ್ಯಾಂಡ್‌ಬಿಲ್ ಹಂಚುವುದು ಸೇರಿದಂತೆ ಆಟೋ ಮೂಲಕ ಪ್ರಚಾರ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಯಾರಿಗೂ ಗೊತ್ತಿಲ್ಲದ ಹಾಗೆ ಟೆಂಡರ್‌ ಪ್ರಕ್ರಿಯೆ ಮುಗಿದಿರುವುದರ ಹಿಂದೆ ಇರುವ ಕಾರಣವಾದರೂ ಏನು ಎಂದು, ಸದಸ್ಯರಾದ ತೌಫಿಕ್, ಖಾಲಿದ್, ಧರ್ಮ, ನಿಂಗರಾಜು, ಸಂತೋಷ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಬಲ ಪಡಿಸಲಾಗುತ್ತದೆ
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದ ಮೇಲೆ ಪಕ್ಷ ಸಂಘಟನೆ ಉತ್ತವಾಗಿದ್ದು ಅಧಿಕಾರಕ್ಕೆ ಬಂದಿದೆ ಎಂದರು. ಸಿದ್ದರಾಯಮ್ಮ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಮೇಲೆ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ನೀಡುವ ಮೂಲಕ, ಬಡವ, ಕೂಲಿ ಕಾರ್ಮಿಕರ ಹಾಗೂ ರೈತರಿಗೆ ಆಶಾಕಿರಣವಾಗಿದ್ದಾರೆ. ಇದರಿಂದ ವಿರೋಧ ಪಕ್ಷಗಳು ರಾಜ್ಯದಲ್ಲಿ ಇಲ್ಲದಂತೆ ಮಾಡಿದ ಕೀರ್ತಿ ಅವರದ್ದಾಗಿದೆ, ಇಂತಹ ವೇಳೆಯಲ್ಲಿ ಯುವಕರು ಪಕ್ಷ ಸಂಘಟನೆ ಮಾಡಲು ಯುವಘಟಕದ ಹೊಸ ಪದಾಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಹೇಳಿದರು.
ಸಿಇಟಿ ನೀಟ್ ಮಾದರಿಯ ಉಚಿತ ಅಣಕು ಪರೀಕ್ಷೆ
ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯಿದ್ದು, ೨೦೨೫ ಮಾರ್ಚ್ ೧೯ರಂದು ಬುಧವಾರ ಬೆಳಗ್ಗೆ ೧೦.೩೦ರಿಂದ ೧೨ ಗಂಟೆಯವರೆಗೆ ಮಲ್ನಾಡ್ ಕೋಚಿಂಗ್ ಸೆಂಟರ್ ವತಿಯಿಂದ ಉಚಿತವಾಗಿ ಸಿಇಟಿ ಮತ್ತು ನೀಟ್ ಮಾದರಿಯ ಅಣಕು ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಸೆಂಟರ್ ನಿರ್ದೇಶಕಿ ಮೇಘನಾ ತಿಳಿಸಿದರು. ೨೦೨೫ರ ನೂತನ ರೀತಿಯ ಪ್ರಶ್ನೆ ಪತ್ರಿಕೆಯ ವಿಧಾನ ದ್ವಿತೀಯ ಪಿಯುಸಿ ೩೫ ಪ್ರಥಮ ಪಿಯುಸಿ ೧೫ ಪ್ರಾಯೋಗಿಕ ಪಠ್ಯದಲ್ಲಿ ೫ರಿಂದ ೧೦ ಪ್ರಶ್ನೆಗಳು ಬಿಎಸ್ಸಿ, ಪಶು ವೈದ್ಯಕೀಯ, ಅರಣ್ಯ ಮೀನುಗಾರಿಕೆ, ಕೃಷಿ, ತೋಟಗಾರಿಕೆ ಕೋರ್ಸ್‌ಗಳಿಗೆ ತರಬೇತಿ ಮಲ್ನಾಡ್ ಕೋಚಿಂಗ್ ಸೆಂಟರ್‌ನಲ್ಲಿ ಮಾರ್ಚ್ ೨೦ರಿಂದ ಪ್ರಾರಂಭ ವಾಗಲಿದೆ ಎಂದು ಹೇಳಿದರು.
ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲ
ಅಲೆಮಾರಿ ಕಾಡಾನೆ ವಿಕ್ರಾಂತ್‌ನನ್ನು ಹಿಡಿಯಲು ನಡೆಸಿದ ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಜೊತೆಗೆ ಏಳು ಸಾಕಾನೆಗಳು ಭಾಗವಹಿಸಿದ್ದವು. ವಿಕ್ರಾಂತ್ ಆನೆ ಗುಂಪಿನಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದೆ. ವೈದ್ಯರು ಕಾಡಾನೆಗೆ ಚುಚ್ಚುಮದ್ದು ನೀಡಲು ಸತತ ಆರು ಗಂಟೆಗಳ ಹರಸಾಹಸಪಟ್ಟರು. ಕಾಡಾನೆ ಗುಂಪಿನೊಳಗೆ ಸೇರಿಕೊಂಡಿದ್ದರಿಂದ, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.
ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ
ವೈದ್ಯರೊಂದಿಗೆ ತುರ್ತು ಸಭೆ ನಡೆಸಿದ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಲಭ್ಯವಿರುವ ಸವಲತ್ತುಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಚಿಕಿತ್ಸೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪ್ರೀತಿ, ವಿಶ್ವಾಸದಿಂದ ರೋಗಿಗಳನ್ನು ಉಪಚರಿಸಿದರೆ ಅರ್ಧ ಕಾಯಿಲೆ ಗುಣವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದರು.
ಸಪ್ತಾಂಬಿಕ ದೇವಿಯ ಜಾತ್ರಾ ಮಹೋತ್ಸವ
ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿ ಹೆಗ್ಗಟ್ಟ ಗ್ರಾಮದ ಗ್ರಾಮ ದೇವತೆ ಸಪ್ತಾಂಬಿಕ ದೇವಿಯ ಜಾತ್ರಾ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಸಪ್ತಂಬಿಕ ಮಾತೆಯು ಶಕ್ತಿ ದೇವತೆಯಾಗಿದ್ದು ಭಕ್ತಿಯಿಂದ ನಡೆದುಕೊಳ್ಳುವ ತನ್ನ ಭಕ್ತರನ್ನು ಉದ್ಧರಿಸುತ್ತಾ ಬಂದಿರುವುದರಿಂದಲೇ ದೇವಿಯ ಮಹಿಮೆ ಮತ್ತು ಪವಾಡಗಳು ಭಕ್ತರಿಗೆ ಮನವರಿಕೆಯಾಗಿದೆ ದಯಾಮಯಳಾಗಿರುವ ಸಪ್ತಾಂಬಿಕ ಮಾತೆಯ ಆಶೀರ್ವಾದ ನಮ್ಮೆಲ್ಲರ ಮೇಲು ಇರಲಿ ಎಂದು ಪ್ರಾರ್ಥಿಸಿವುದಾಗಿ ಹೇಳಿದರು.
ವ್ಯಾಪಾರ ವಹಿವಾಟು ನಡೆಸಲು ಮಹಿಳೆಯರಿಗೆ ಉತ್ತೇಜನ ಬೇಕು
ಗ್ರಾಮೀಣ ಪ್ರದೇಶದ ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವ ಸಲುವಾಗಿ ಈ ರೀತಿಯ ಸ್ಟಾಲ್‌ಗಳನ್ನು ತೆರೆದು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಅವರುಗಳಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು. ಮಾರಾಟ ಮೇಳಗಳು ಬೇರೆ ಬೇರೆ ಸ್ಥಳಗಳಲ್ಲೂ ತೆರೆದು ವ್ಯಾಪಾರ ವಹಿವಾಟು ನಡೆಸಲು ಮಹಿಳೆಯರಿಗೆ ಉತ್ತೇಜನ ನೀಡಬೇಕಿದೆ ಎಂದರು. ನಂತರ ಉತ್ಪನ್ನಗಳ ಗುಣ್ಣಮಟ್ಟದ ಬಗ್ಗೆ ಚರ್ಚಿಸಿ, ಹಲವು ಪದಾರ್ಥಗಳನ್ನು ಖರೀದಿಸಿ, ಶುಭಹಾರೈಸಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved