ಕೋಡಿಮಠದಲ್ಲಿ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಚಾಲನೆಹಾರನಹಳ್ಳಿ ಕೋಡಿ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಜಾತ್ರಾ ಮಹೋತ್ಸವದ ಮೊದಲೇ ದಿನವಾದ ಶನಿವಾರ, ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಮಠದ ಸಂಪ್ರದಾಯದಂತೆ ಸಾವಿರಾರು ಮುತ್ತೈದೆಯರಿಗೆ ಉಡಿ ತುಂಬಿ, ಕುಂಕುಮ ನೀಡಿ, ಬಾಗಿನ ಕೊಟ್ಟು ಸತ್ಕರಿಸಲಾಯಿತು. ಜಾತಿ, ಮತ, ಪಂಥ ಬೇಧವಿಲ್ಲದೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಹೆಂಗೆಳೆಯರು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳಿಂದ ಸಾಂಪ್ರದಾಯಿಕ ಗೌರವ ಜೊತೆಗೆ ಆಶೀರ್ವಚನ ಪಡೆದರು.