ಸರ್ಕಾರದ ಸವಲತ್ತು ಬಳಸಿಕೊಂಡು ಬದುಕನ್ನು ಉತ್ತಮವಾಗಿಸಿಕೊಳ್ಳಿಕಾರ್ಮಿಕರು ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಂಡು ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಕಾರ್ಮಿಕ ಕಾಯ್ದೆಗಳ ಬಗ್ಗೆ ತಾಲೂಕು ಮಟ್ಟದ ಕಾರ್ಯಾಗಾರ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟನೆ ಮಾಡಿದ ನಂತರ ಮಾತನಾಡಿ, ದೇಶದ ಅಭಿವೃದ್ಧಿಗೆ ಬೆನ್ನೆಲುಬು ಕಾರ್ಮಿಕರಾಗಿದ್ದಾರೆ. ಭಾರತ ವಿಶ್ವ ಗುರು ಆಗಬೇಕಾದರೆ ಹಾಗೂ ದೇಶ ಹೆಚ್ಚಿನ ಅಭಿವೃದ್ಧಿ ಕಾಣಬೇಕಾದರೆ ಕಾರ್ಮಿಕರ ಶ್ರಮ ಮುಖ್ಯ ಎಂದರು.