ಬೇಡಿಕೆ ಈಡೇರಿಕೆಗೆ ಪೌರ ನೌಕರರ ಪ್ರತಿಭಟನೆಸಮಸ್ತ ಪೌರ ನೌಕರರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ತಮಟೆ ಚಳವಳಿ ಜೊತೆಗೆ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರಮುಖವಾದ ನ್ಯಾಯಸಮ್ಮತ ಬೇಡಿಕೆಗಳೆಂದರೆ, ರಾಜ್ಯ, ನಗರ, ಸ್ಥಳೀಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಕೆ ಜಿಐಡಿ, ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನಮಗೂ ವಿಸ್ತರಿಸಬೇಕು ಎಂದರು.