ಕಬ್ಬಳಿ ಬಸವೇಶ್ವರಸ್ವಾಮಿಯ ಜಾತ್ರಾ ಮಹೋತ್ಸವಹಿರಿಸಾವೆ ಹೋಬಳಿಯ ಕಬ್ಬಳಿ ಬಸವೇಶ್ವರಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಕಾರ್ತಿಕ ಸೋಮವಾರದ ರಾತ್ರಿ ಸರ್ಪೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಮತ್ತು ಕಲ್ಯಾಣಿಯಲ್ಲಿ ತೆಪ್ಪೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮುತ್ತಿನ ಪಲ್ಲಕ್ಕಿಯ ಮೆರವಣಿಗೆಯೂ ಮಂಗಳವಾದ್ಯ, ಮಹಿಳಾ ವೀರಗಾಸೆ, ಡೊಳ್ಳು ಕುಣಿತ, ಕೋಲಾಟ, ಚಂಡವಾದ್ಯ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ನಡೆಯಿತು.