ಆಲೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಮಹಾ ಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಬೂತ್ ಅಧ್ಯಕ್ಷರು ಹಾಗೂ ತಂಡದವರ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಇನ್ನೂ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಶ್ರಮ ಹಾಕುವ ಮೂಲಕ ಸದಸ್ಯತ್ವ ಹೆಚ್ಚು ಮಾಡಬೇಕಾಗಿದೆ. ಆದ್ದರಿಂದ ತಮ್ಮ ತಂಡದೊಂದಿಗೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಸದಸ್ಯರ ನೋಂದಣಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.