ಮಲ್ಲಿಪಟ್ಟಣ ಏತನೀರಾವರಿ ಯೋಜನೆ ಪೂರ್ಣಕ್ಕೆ ಸೂಚನೆಏತನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿಲ್ಲ ಹಾಗೂ ಯೋಜನೆಗೆ ಜಮೀನು ವಶಪಡಿಸಿಕೊಂಡ ರೈತರಿಗೆ ಪರಿಹಾರದ ಮೊತ್ತ ನೀಡಿಲ್ಲ ಎಂಬ ದೂರುಗಳಿfದ್ದ ಹಿನ್ನೆಲೆಯಲ್ಲಿ ಕಂದಾಯ, ನೀರಾವರಿ, ಅರಣ್ಯ, ಸೆಸ್ಕ್ ಸೇರಿದಂತೆ ಸಂಬಂಧಿಸಿದ ಇಲಾಖೆ ಮತ್ತು ರೈತರ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ರೈತರಿಗೆ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಭೂಮಿ ದಾಖಲೆಗಳು ಮತ್ತು ಒಡೆತನದ ಸಮಸ್ಯೆಇರುವ ಕಡೆ ಸಮಸ್ಯೆ ಬಗೆಹರಿಸಿ ಪರಿಹಾರ ನೀಡಲು ಸೂಚಿಸಲಾಗಿದೆ.