ಮಕ್ಕಳು ಚಿಕ್ಕಂದಿನಿಂದಲೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕುವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ನಾಯಕತ್ವದ ಗುಣ ಹಾಗೂ ಸಾಮಾಜಿಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪಾಳ್ಯ ಗ್ರಾಮಪಂಚಾಯಿತಿ ಅಧ್ಯಕ್ಷೆ ಭವ್ಯ ಪುರುಷೋತ್ತಮ್ ತಿಳಿಸಿದರು. ಭಾರತದಲ್ಲಿ ಎನ್‌ಎಸ್‌ಎಸ್ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮವನ್ನು ಅರಿಯುವುದರ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.