ವಕ್ಫ್ ಬೋರ್ಡ್ ವಿರುದ್ಧ ರೈತಸಂಘ ಪ್ರತಿಭಟನೆರೈತಪರ ಎನ್ನುವ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ರಾತ್ರೋ ರಾತ್ರಿ ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಸಚಿವ ಜಮೀರ್ ಅಹಮದ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೂಚನೆ ಮೇರೆಗೆ ವಕ್ಫ್ ಆಸ್ತಿ ಘೋಷಿಸಲಾಗುತ್ತಿದೆ. ರಾಜ್ಯದಲ್ಲಿ ರೈತರು, ಹಿಂದೂಗಳು ಮತ್ತು ದೇವಾಲಯಗಳಿಗೆ ಸೇರಿದ ಜಮೀನನ್ನು ವಕ್ಫ್ ಬೋರ್ಡ್ ತನ್ನ ಆಸ್ತಿ ಎಂದು ಕಬಳಿಸುವ ಹುನ್ನಾರಕ್ಕೆ ಮುಂದಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಯಿತು.