• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕ ಸದೃಢತೆಗೆ ಕ್ರೀಡಾಕೂಟ ಸಹಕಾರಿ
ನಗರದ ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು ಹಾಗೂ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ವಿವಿಧ ಗಣ್ಯರು ಆಗಮಿಸಿ ಚಾಲನೆ ನೀಡಿದರು.
ಕಾಲೇಜಿಗೆ ಕೀರ್ತಿ ತಂದ ಟೈಮ್ಸ್‌ ವಿದ್ಯಾರ್ಥಿಗಳಿಗೆ ಸನ್ಮಾನ
೨೦೨೪-೨೫ನೇ ಸಾಲಿನಲ್ಲಿ ಪರೀಕ್ಷೆ ಎದುರಿಸಿದ ೨೬೫ ವಿದ್ಯಾರ್ಥಿಗಳ ಪೈಕಿ ೧೦೧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿ ಸಾಧನೆಗೈದಿದ್ದಾರೆ. ಎಲ್ಲ ಮಕ್ಕಳನ್ನು ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿ ಸಿಹಿ ಹಂಚಿದರು. ಟೈಮ್ಸ್ ಪಿಯು ಕಾಲೇಜು ತಾಲೂಕು, ತಾಲೂಕಿನಾಚೆಗೂ ತನ್ನ ಕೀರ್ತಿಯನ್ನು ೧೧ ವರ್ಷಗಳಿಂದ ವಿಸ್ತರಿಸಿದೆ. ವಿಜ್ಞಾನ ವಿಭಾಗದಲ್ಲಿ ಪಿಯು ಕಾಲೇಜು ತೆರೆದು ೧೧ ವರ್ಷಗಳಿಂದ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.
ನಾಡಗೌಡರ ಸಮ್ಮುಖದಲ್ಲಿ ಬೇಲೂರು ನಾಡ ರಥೋತ್ಸವ
ವಿಶ್ವವಿಖ್ಯಾತ ಬೇಲೂರು ಶ್ರೀ ಚನ್ನಕೇಶವಸ್ವಾಮಿಯ ನಾಡ ರಥೋತ್ಸವ ಸಹಸ್ರಾರು ಭಕ್ತರ ನಡುವೆ ಶುಕ್ರವಾರ ಅದ್ಧೂರಿಯಾಗಿ ನಡೆದು ಸ್ವಸ್ಥಾನಕ್ಕೆ ಸೇರಲ್ಪಟ್ಟಿತು. ಸುತ್ತಮುತ್ತ ಗ್ರಾಮದಿಂದ ಬಂದಿದ್ದ ನಾಡಪಟೇಲರು ಹಾಗೂ ಭಕ್ತರು ಬೆಳಗಿನಿಂದಲೇ ಶ್ರೀ ಚನ್ನಕೇಶವಸ್ವಾಮಿ ದೇಗುಲದ ಬಳಿ ಜಮಾಯಿಸಿದ್ದರು. ಮಧ್ಯಾಹ್ನದ ವೇಳೆಗೆ ದೇಗುಲ ಸುತ್ತ ಜನಸಾಗರವೇ ನೆರೆದಿತ್ತು. ಶ್ರೀಯವರ ದಿವ್ಯ ರಥವನ್ನು ಶುಕ್ರವಾರ ಮಧ್ಯಾಹ್ನ 3.30ರ ಸಮಯದಲ್ಲಿ ಎಳೆಯಲು ಚಾಲನೆ ನೀಡಲಾಯಿತು. ದೇವಸ್ಥಾನದ ಹಿಂಭಾಗವನ್ನು ದಾಟಿ ಕಾಮನ ಮೂಲೆ ಬಳಸಿಕೊಂಡು ರಥದ ಮನೆ ಜಾಗದ ಮುಂಭಾಗ ತಂದು ನಿಲ್ಲಿಸಲಾಯಿತು.
ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ
ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಆರ್. ಎಂ. ಮೋಹನ ರೆಡ್ಡಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದರು. ಲೋಕಾಯುಕ್ತ, ಭ್ರಷ್ಟಾಚಾರ ಮತ್ತು ಆರ್‌.ಟಿ.ಐ. ಕಾಯ್ದೆಗಳ ಬಗ್ಗೆ ಅರಿವು ಇಲ್ಲದಿದ್ದರೆ, ತಾವು ಮಾಡುವ ತಪ್ಪಿನ ಜೊತೆ ಮತ್ತೊಬ್ಬರೂ ಸಹ ತಪ್ಪು ಮಾಡುವ ಸಾಧ್ಯತೆ ಇರುತ್ತದೆ. ತಾವು ತಿಳಿದಿರುವ ಕಾನೂನು ಬಗ್ಗೆ ಇತರರಿಗೆ ತಿಳಿಸುವ ಕಾರ್ಯ ಅತ್ಯಂತ ಮಹತ್ವವಾದುದು ಎಂದರು.
ಬಡ್ಡಿ ಹಣದಿಂದ ಪಿಂಚಣಿ ನೀಡದಿದ್ದಲ್ಲಿ ಅಮರಣಾಂತ ಉಪವಾಸ
ನಾವು ದುಡಿದಂತಹ ಸಂಸ್ಥೆಯಲ್ಲಿ ಪಿಂಚಣಿ ಕೇಳುವುದಕ್ಕೆ ನಮಗೆ ಹಕ್ಕಿದೆ, ನಮ್ಮ ಬೇಡಿಕೆಗೆ ಬ್ಯಾಂಕಿನವರು ಸ್ಪಂದಿಸಬೇಕು. ಜಿಲ್ಲಾ ಸಹಕಾರಿ ಬ್ಯಾಂಕ್ ತಾನು ಪಡೆಯುತ್ತಿರುವ ಬಡ್ಡಿಯಿಂದ ನಮಗೆ ಪಿಂಚಣಿ ಕೊಡಬೇಕು. ಏನಾದರೂ ಸರ್ಕಾರದ ಉದಾಸೀನತೆ ಹೀಗೆ ಮುಂದುವರಿದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್‌ಲ್ಲಿ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಜಿಲ್ಲಾ ಸಹಕಾರ ಬ್ಯಾಂಕುಗಳ ನಿವೃತ್ತ ನೌಕರರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ಎನ್. ಕಾಳೇಗೌಡ ಎಚ್ಚರಿಸಿದರು.
ನಾಳೆ ಜೇನುಕಲ್ಲು ಸಿದ್ದೇಶ್ವರ ರಸ್ವಾಮಿ ರಥೋತ್ಸವ
ಏ.೧೨ರಂದು ಶನಿವಾರ ಮುಂಜಾನೆ ಹುಣ್ಣಿಮೆ ಅಂಗವಾಗಿ ಬೆಟ್ಟದ ಮೇಲೆ ಧ್ವಜಾರೋಹಣ, ಅಂಕುರಾರ್ಪಣೆ, ನೂರೊಂದೆಡೆ ಸೇವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಲಿದೆ. ಸಂಜೆ ೭ ಗಂಟೆಗೆ ಬಸವೇಶ್ವರಸ್ವಾಮಿ ಉತ್ಸವ, ಗದ್ದುಗೆ ಮಂಟಪದಲ್ಲಿ ಸಾಮ್ರಾಜ್ಯೋತ್ಸವ, ಹುಲಿವಾಹನ, ಸೂರ್ಯಮಂಡಲೋತ್ಸವ, ಬೆಳ್ಳಿಪಲ್ಲಕ್ಕಿ ಉತ್ಸವ, ಬಿಲ್ವ ವೃಕ್ಷೆತ್ಸವ, ಹರಕೆ ತೀರಿಸುವವರಿಗೆ ಬಾಯಿಬೀಗ, ಚಂದ್ರ ಮಂಡಲೋತ್ಸವ, ಅಗ್ನಿಕುಂಡ ಸೇವೆ ಹಾಗೂ ಕೆಂಚಮ್ಮನವರ ಸನ್ನಿಧಿಯಲ್ಲಿ ಗುಗ್ಗಳಸೇವೆ ನೆರವೇರಲಿದೆ.
ಶಿಕ್ಷಕರಿಗೆ ತಾಂತ್ರಿಕ ಪ್ರಜ್ಞೆ ಅಗತ್ಯ
ಶಿಕ್ಷಕರು ಕೇವಲ ಪಠ್ಯಪುಸ್ತಕದಲ್ಲಿರುವುದನ್ನು ಬೋಧಿಸುವುದಲ್ಲ. ವಿದ್ಯಾರ್ಥಿಗಳಿಗೆ ಪ್ರಸ್ತುತ ಜಗತ್ತಿನಲ್ಲಿ ಜೀವಿಸುವ ಹಾಗೆ ನೈತಿಕ ಮೌಲ್ಯಗಳನ್ನು ಬೆಳೆಸಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಕರು ಎರಡನೆಯ ಪೋಷಕರಿದ್ದಂತೆ. ನಿಜವಾದ ಪೋಷಕರು ಅವರ ಅಗತ್ಯತೆಗಳನ್ನು ಪೂರೈಸಿದರೆ, ಶಿಕ್ಷಕರು ವಿದ್ಯಾರ್ಥಿಗಳ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತಾರೆ. ಶಿಕ್ಷಕ ವೃತ್ತಿ ಕೆಲವರಿಗೆ ಇಚ್ಛೆಯಾದರೆ, ಇನ್ನೂ ಕೆಲವರಿಗೆ ಆಕಸ್ಮಿಕವಾಗಿರಬಹುದು, ಆದರೆ ಆ ವೃತ್ತಿಯಲ್ಲೇ ಪ್ರಾಮಾಣಿಕವಾಗಿ ದುಡಿದು ಸಂತೃಪ್ತಿಯನ್ನು ಪಡೆಯಬೇಕು.
ನಾಳೆ ಬ್ರಾಹ್ಮಣ ಮಹಾಸಭಾದ ಚುನಾವಣೆ
ಏಪ್ರಿಲ್ ೧೩ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಮಹಾಸಭೆಯ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿ ವೇದಮೂರ್ತಿ ಡಾ.ಭಾನುಪ್ರಕಾಶ್ ಶರ್ಮಾ ಸ್ಪರ್ಧೆ ಮಾಡಿದ್ದು, ಮತವನ್ನು ನೀಡುವಂತೆ ಮನವಿ ಮಾಡಿದರು. ಭಾನುಪ್ರಕಾಶ್ ಶರ್ಮ ಅವರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ೨೦೨೫ರ ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಆಗಿರುವುದು ಹಾಗು ಅಶೋಕ ಹಾರನಹಳ್ಳಿ ಮತ್ತು ಅವರ ಸಮಸ್ತ ತಂಡ ಅವರನ್ನು ಬೆಂಬಲಿಸಿದೆ.
ಮಲ್ಲಾಪುರ ಸೊಸೈಟಿಗೆ ಶ್ರೀನಿವಾಸ್ ಅಧ್ಯಕ್ಷ ಗಣೇಶ್ ಉಪಾಧ್ಯಕ್ಷ
ಮಲ್ಲಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ೧೨ ಜನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಗಣೇಶ್, ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ, ನಿರ್ದೇಶಕರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಸೊಸೈಟಿ ಬಹಳ ಚೆನ್ನಾಗಿ ನಡೆದುಕೊಂಡು ಹೋಗುತ್ತಿದೆ. ಆದ್ದರಿಂದ ಹೊಸದಾಗಿ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಕಾಲು ಎಳೆಯುವ ಕೆಲಸ ಮಾಡದೆ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಬೇಲೂರು ಶ್ರೀ ಚನ್ನಕೇಶವಸ್ವಾಮಿ ಅದ್ಧೂರಿ ಬ್ರಹ್ಮರಥೋತ್ಸವ
ಬೇಲೂರು ಶ್ರೀ ಚನ್ನಕೇಶವಸ್ವಾಮಿ ಬ್ರಹ್ಮ ರಥೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿತು. ಜಿಲ್ಲೆ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಲಕ್ಷಾಂತರ ಭಕ್ತರು ಶ್ರೀ ಚನ್ನಕೇಶವ ಸ್ವಾಮಿಯ ದಿವ್ಯ ಬ್ರಹ್ಮ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥವನ್ನು ಪುಷ್ಪಲಂಕಾರಗಳಿಂದ ಶೃಂಗರಿಸಿ ಪೂಜಾ ವಿಧಿವಿಧಾನ ನೆರವೇರಿಸಿ ರಾಜಗೋಪುರದ ಮಹಾದ್ವಾರದಿಂದ ಶ್ರೀ ಚನ್ನಕೇಶವ ಸ್ವಾಮಿಯ ಉತ್ಸವ ಮೂರ್ತಿಯನ್ನು ವೇದಘೋಷಗಳ ನಡುವೆ ಪ್ರತಿಷ್ಠಾಪಿಸಲಾಯಿತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 552
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved