ವಿಐಪಿ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಸೀಮಿತಗೊಳಿಸಿಜಾತ್ರಾ ಸಮಯದಲ್ಲಿ ಎಲ್ಲಾ ಭಕ್ತರಿಗೂ ಶೀಘ್ರವಾಗಿ ಶ್ರೀ ಹಾಸನಾಂಬೆ ದರ್ಶನ ಸಿಗುವಂತಾಗಬೇಕು. ವಿಐಪಿ ದರ್ಶನ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಮಾತ್ರ ಸೀಮಿತಗೊಳಿಸಬೇಕು. ಉಳಿದ ದಿನದ ಕಡ್ಡಾಯವಾಗಿ ವಿಐಪಿ ದರ್ಶನ ನಿಷೇಧಿಸಬೇಕು ಎಂದು ಒತ್ತಾಯಿಸಿ ಶ್ರೀ ಹಾಸನಾಂಬೆ ಜಾತ್ರಾ ಹಿತರಕ್ಷಣಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಸಿ. ಸತ್ಯಭಾಮಗೆ ಮಂಗಳವಾರ ಮನವಿ ಸಲ್ಲಿಸಿದರು.